ಬೆಂಗಳೂರು: ರಾಜ್ಯದ ದೊರೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಕೊರೊನಾ ಆತಂಕದಿಂದ ದೂರವಾಗಿದ್ದಾರೆ. ಯಡಿಯೂರಪ್ಪ ಅವರಿಗೆ ನಡೆಸಿದ ಕೋವಿಡ್ ಪರೀಕ್ಷೆಯಲ್ಲಿ ನೆಗೆಟಿವ್ ಬಂದಿದ್ದು ನಿರಾಳರಾಗಿದ್ದಾರೆ.
ಕಳೆದ ವಾರ ಗೃಹ ಕಚೇರಿ ಕೃಷ್ಣಾ ಹಾಗೂ ಕಾವೇರಿ ನಿವಾಸದ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಈ ಹಿನ್ನೆಲೆಯಲ್ಲಿ ಕೊರೊನಾ ಟೆಸ್ಟ್ ಗೆ ಒಳಗಾಗಿದ್ದ ಯಡಿಯೂರಪ್ಪ, ಮುನ್ನೆಚ್ಚರಿಕೆ ಕ್ರಮವಾಗಿ ಸ್ವಯಂ ಹೋಂಕ್ವಾರಂಟೈನ್‍ಗೆ ಒಳಗಾಗಿದ್ದರು.
ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಸಿಎಂ ಕಾವೇರಿ ನಿವಾಸ, ಗೃಹ ಕಚೇರಿ ಕೃಷ್ಣಾ, ಡಾಲರ್ಸ್ ಕಾಲೋನಿಯ ಧವಳಗಿರಿ ನಿವಾಸಕ್ಕೆ ಬಿಬಿಎಂಪಿ ಸಿಬ್ಬಂದಿ ಸ್ಯಾನಿಟೈಸ್ ಮಾಡಿದ್ದಾರೆ.
ಕಳೆದ ಎರಡು ವಾರಗಳಿಂದ ಗೃಹ ಕಚೇರಿ ಕೃಷ್ಣಾದಲ್ಲಿ ನಡೆಯುತ್ತಿದ್ದ ಸಭೆಗಳನ್ನು ವಿಧಾನಸೌಧಕ್ಕೆ ಶಿಫ್ಟ್ ಮಾಡಿದ್ದರು. ನಿನ್ನೆಯೂ ವಿಧಾನಸೌಧದಲ್ಲಿ 8 ವಲಯಗಳ ಸಚಿವರ ಜತೆ ವಿಧಾನಸೌಧದಲ್ಲೇ ಸಭೆ ನಡೆಸಿದ್ದರು. ಇಂದು ಸಂಜೆ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರ ಜತೆ ಸಭೆ ಆರಂಭಿಸುವ ಮೂಲಕ ಕೃಷ್ಣಾದಲ್ಲಿ ಚಟುವಟಿಕೆಗಳಿಗೆ ಚಾಲನೆ ಸಿಗಲಿದೆ.
ದಿನ ಭವಿಷ್ಯ (21-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
ದಿನ ಭವಿಷ್ಯ: 21-03-2026 ಮೇಷ ರಾಶಿ ಇಂದು ನಿಮ್ಮ ರಾಶಿಗೆ ಚಂದ್ರನ ಸಂಚಾರ ಮತ್ತು ಶನಿವಾರದ ಪ್ರಭಾವ ಇರುವುದರಿಂದ ಕೆಲಸದಲ್ಲಿ ಸ್ವಲ್ಪ ಒತ್ತಡ ಕಂಡುಬರಬಹುದು. ಆದರೆ ಸಂಜೆಯ...








