ಭಾರತದಲ್ಲಿ ಕೊರೊನಾ ವೈರಸ್ ಇನ್ನೂ ಸಮುದಾಯ ಹಂತಕ್ಕೆ ತಲುಪಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಹೇಳಿದೆ. ಇದೊಂದು ರೀತಿಯ ಸಮಾಧಾನ ತರುವ ವಿಚಾರವಾದರೂ ಆತಂಕ ಮಾತ್ರ ತಪ್ಪಿಲ್ಲ. ಐಸಿಎಂಆರ್ ಅಧ್ಯಯನಕ್ಕೆ ಸಂಬಂಧಿಸಿದ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಆರೋಗ್ಯ ಸಚಿವಾಲಯದ ಹಿರಿಯ ಅಧಿಕಾರಿ ಲವ್ ಅಗರ್ವಾಲ್, ಇದುವರೆಗೆ ದೇಶದಲ್ಲಿ ಸಮುದಾಯ ಮಟ್ಟದಲ್ಲಿ ಕೊರೋನಾ ಸೋಂಕು ಹರಡಿಲ್ಲ. ಜನರು ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ಇದೆ ವೇಳೆ ಮಾತನಾಡಿದ ಅವರು, ಜನರು ಲಾಕ್ ಡೌನ್ ನಿಯಮಗಳನ್ನು ಮತ್ತು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಎಚ್ಚರಿಸಿದರು. 104 ಜನರಲ್ಲಿ 40 ಜನಕ್ಕೆ ತೀವ್ರ ಉಸಿರಾಟದ ತೊಂದರೆ ಕಂಡು ಬಂದಿತ್ತು. ಅಲ್ಲದೆ ಅವರಲ್ಲಿ ಕೊರೋನಾ ಸೋಂಕು ದೃಢಪಟ್ಟಿತ್ತು. ಜೊತೆಗೆ ಅವರು ವಿದೇಶಗಳಿಂದ ಬಂದಿರಲಿಲ್ಲ ಅಥವಾ ಯಾವುದೇ ಸೋಂಕು ಇರುವ ವ್ಯಕ್ತಿಗಳೊಂದಿಗೆ ಸಂಪರ್ಕ ಹೊಂದಿರಲಿಲ್ಲ ಎಂಬ ವರದಿಗೆ ಸಂಬಂಧಪಟ್ಟಂತೆ ಪ್ರಶ್ನೆ ಕೇಳಲಾಗಿತ್ತು. ಈ ಪ್ರಶ್ನೆಗೆ ಉತ್ತರಿಸಿದ ಅಗರ್ವಾಲ್, ಸಮುದಾಯ ಹರಡುವಿಕೆಯಾದರೆ ನಾವು ಮೊದಲು ಹೇಳಿ ಜನರಿಗೆ ಮುನ್ನೆಚ್ಚರಿಕೆ ಹೇಳುತ್ತೇವೆ ಎಂದು ತಿಳಿಸಿದ್ದಾರೆ.
ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ
ಬೆಂಗಳೂರು: ರಾಜ್ಯದ ಸಮಸ್ತ ರೈತ ಬಾಂಧವರಿಗೆ ಕಂದಾಯ ಇಲಾಖೆಯು ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ಮುಂದೆ ರೈತರು ತಮ್ಮ ಜಮೀನಿನ ಪಹಣಿ ಅಥವಾ ಆರ್‌ಟಿಸಿಯಲ್ಲಿ (RTC) ಹೆಸರು ತಪ್ಪಾಗಿದ್ದರೆ,...








