ಕೊಡಗು : ರಾಜ್ಯದಲ್ಲಿ ಮತ್ತೊಂದು ಕೊರೊನಾ ಸೋಂಕು ಪ್ರಕರಣ ದೃಢಪಟ್ಟಿದೆ. ಈ ಬಗ್ಗೆ ಆರೋಗ್ಯ ಸಚಿವ ಶ್ರೀರಾಮುಲು ಟ್ವೀಟ್ ಮಾಡಿದ್ದಾರೆ. ”ಇಂದು ಕೊಡಗಿನಲ್ಲಿ ಮೊದಲ #COVID19 ಸೋಂಕು ದೃಢಪಟ್ಟಿದ್ದು, ಈ ವ್ಯಕ್ತಿಯು ಸೌದಿ ಅರೇಬಿಯಾ ಪ್ರವಾಸದಿಂದ ಹಿಂದಿರುಗಿದ್ದರು. ಇವರನ್ನು ಪ್ರತ್ಯೇಕಿಸಲ್ಪಟ್ಟ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಿ ನಿಗಾವಹಿಸಲಾಗಿದೆ. ಇದು ಕರ್ನಾಟಕದ 15ನೇ #COVID19 ಪ್ರಕರಣವಾಗಿದೆ.” ಎಂದು ಬರೆದುಕೊಂಡಿದ್ದಾರೆ.

ಕೊಡಗಿನ ವ್ಯಕ್ತಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಈತ ಸೌದಿ ಅರೇಬಿಯಾ ಪ್ರವಾಸದಿಂದ ಬಂದಿದ್ದರು. ಈ ವ್ಯಕ್ತಿಗೆ ಈಗ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಹೀಗಾಗಿ ಆ ವ್ಯಕ್ತಿಯನ್ನು ಚಿಕಿತ್ಸೆಗೆ ಒಳಪಡಿಲಾಗಿದೆ. ಶ್ರೀರಾಮಲು ಈ ಬಗ್ಗೆ ಖಚಿತಪಡಿಸಿದ್ದಾರೆ.
ನಿನ್ನೆಯ ಪ್ರಾರಂಭದಲ್ಲಿ ಕರ್ನಾಟಕದಲ್ಲಿ 12 ಕೊರೊನಾ ಪ್ರಕರಣಗಳು ಇತ್ತು. ಇಂದು ಮತ್ತೊಂದು ಕೊರೊನಾ ಪ್ರಕರಣ ಸೇರಿಕೊಂಡಿದೆ.








