ದೇಶಕ್ಕೆ ಮತ್ತೆ ಕೊರೊನಾ ಆತಂಕ ಕಾಡುತ್ತಿದೆ. ಕಳೆದ 24 ಗಂಟೆಗಳಲ್ಲಿ 6,155 ಹೊಸ ಪ್ರಕರಣಗಳು ಪತ್ತೆಯಾಗಿವೆ.
ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 4,47,51,259ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,30,954ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 31,194ಕ್ಕೆ ತಲುಪಿದೆ. ಈ ನಡುವೆ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 4,41,89,111ಕ್ಕೆ ತಲುಪಿದೆ.
ಒಂದೇ 1,09,378 ದಿನ ಪರೀಕ್ಷೆಗೊಳಪಡಿಸಲಾಗಿದ್ದು, ಇಲ್ಲಿಯವರೆಗೆ 92,26,13,516 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ. ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೆ 220,66,22,663 ಜನರು ಲಸಿಕೆ ಪಡೆದಿದ್ದಾರೆ.








