ದೇಶಕ್ಕೆ ಮತ್ತೆ ಕೊರೊನಾ ಭೀತಿ ಶುರುವಾಗಿದ್ದು, ಆತಂಕ ಹೆಚ್ಚಾಗುತ್ತಿದೆ.
ದೇಶದಲ್ಲಿ ಕಳೆದ 25 ಗಂಟೆಗಳಲ್ಲಿ 702 ಜನರಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಆತಂಕಕ್ಕೆ ಕಾರಣವಾಗುತ್ತಿದೆ. ಹಿಂದಿನ ದಿನ ದೇಶದಲ್ಲಿ 529 ಜನರಿಗೆ ಸೋಂಕು ಕಾಣಿಸಿಕೊಂಡಿತ್ತು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಈ ಮಾಹಿತಿ ನೀಡಿದೆ.
ಈ ಮೂಲಕ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 4,097 ದಾಟಿದೆ. ಇದೇ ಅವಧಿಯಲ್ಲಿ ವಿವಿಧ ರಾಜ್ಯಗಳಲ್ಲಿ ಒಟ್ಟು 6 ಜನರು ಸಾವನ್ನಪ್ಪಿದ್ದಾರೆ. ಮಹಾರಾಷ್ಟ್ರದಲ್ಲಿ ಇಬ್ಬರು, ದೆಹಲಿ, ಕರ್ನಾಟಕ, ಕೇರಳ ಮತ್ತು ಪಶ್ಚಿಮ ಬಂಗಾಳದಲ್ಲಿ ಒಬ್ಬ ರೋಗಿಯು ಸಾವನ್ನಪ್ಪಿದ್ದಾರೆ. ಬುಧವಾರ 529 ಜನರಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಈ ಸಂದರ್ಭದಲ್ಲಿ ಐವರು ಸಾವನ್ನಪ್ಪಿದ್ದರು. ಕಳೆದ 24 ಗಂಟೆಗಳಲ್ಲಿ ಇಬ್ಬರು ಸಾವನ್ನಪ್ಪಿದ್ದರು.