ADVERTISEMENT
Monday, August 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ರಾಷ್ಟ್ರಪತಿಗಳಿಗೂ ಕಾಡಿದ ಕೊರೊನಾ ಭೀತಿ

admin by admin
March 22, 2020
in International, Politics
Share on FacebookShare on TwitterShare on WhatsappShare on Telegram

ಬಾಲಿವುಡ್ ಗಾಯಕಿ ಕನಿಕಾ ಕಪೂರ್ ಗೆ ತಗುಲಿರುವ ಕೊರೊನಾ ಸೋಂಕು ಸಂಸದ ದುಶ್ಯಂತ್ ಸಿಂಗ್ ಮತ್ತು ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರನ್ನೂ ಕಾಡಿದೆ. ರಾಷ್ಟ್ರಪತಿಗಳ ಎಲ್ಲ ದೈನಂದಿನ ನಿಗದಿತ ಕಾರ್ಯಕ್ರಮಗಳನ್ನು ಮುಂದೂಡಲಾಗಿದ್ದು, ಅವರು ಕೋವಿಡ್‌-19 ಪರೀಕ್ಷೆಗೆ ಒಳಗಾಗುತ್ತಾರೆ ಎಂದು ರಾಷ್ಟ್ರಪತಿ ಭವನದ ಮೂಲಗಳು ತಿಳಿಸಿವೆ ಎನ್ನಲಾಗಿದೆ.

ಕೊರೋನಾ ಸೋಂಕು ದೃಢಪಟ್ಟಿರುವ ಬಾಲಿವುಡ್ ಗಾಯಕಿ ಆಯೋಜಿಸಿದ್ದ ಪಾರ್ಟಿಯಲ್ಲಿ ಬಿಜೆಪಿ ಸಂಸದ ದುಶ್ಯಂತ್‌ ಸಿಂಗ್‌ ಭಾಗಿಯಾಗಿದ್ದರು. ನಂತರ ದುಶ್ಯಂತ್‌ ಸಿಂಗ್‌ ಸಂಸತ್ ಗೂ ತೆರಳಿ ಅಧಿವೇಶನದಲ್ಲಿ ಪಾಲ್ಗೊಂಡಿದ್ದರು ಮತ್ತು ರಾಷ್ಟ್ರಪತಿ ಭವನದಲ್ಲಿ ಉತ್ತರ ಪ್ರದೇಶ ಹಾಗು ರಾಜಸ್ಥಾನ ಸಂಸದರಿಗೆ ಆಯೋಜಿಸಿದ್ದ ಉಪಹಾರ ಕೂಟದಲ್ಲಿ ಕೂಡ ಭಾಗವಹಿಸಿದ್ದರು. ಉಪಹಾರ ಕೂಟದಲ್ಲಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಕೂಡ ಭಾಗವಹಿಸಿದ್ದು, ರಾಷ್ಟ್ರಪತಿಗಳಿಗೆ ಕೊರೊನಾ ಆತಂಕ ಕಾಡಲು ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿಗಳು ಮುನ್ನೆಚ್ಚರಿಕಾ ಕ್ರಮವಾಗಿ ಕೋವಿಡ್‌-19 ಪರೀಕ್ಷೆಗೆ ಒಳಪಡಲಿದ್ದಾರೆ ಎಂದು ರಾಷ್ಟ್ರಪತಿ ಭವನದ ಮೂಲಗಳು ತಿಳಿಸಿವೆ. ಅಲ್ಲದೆ ಸಂಸತ್ತು ಹಾಗೂ ರಾಷ್ಟ್ರಪತಿ ಆಯೋಜಿಸಿದ್ದ ಉಪಹಾರ ಕೂಟದಲ್ಲಿ ದುಶ್ಯಂತ್ ರೊಂದಿಗೆ ಸಂಪರ್ಕ ಹೊಂದಿದ ಸಂಸದರೆಲ್ಲರೂ ಭೀತಿಗೊಳಗಾಗಿದ್ದಾರೆ.
ಮಾರ್ಚ್‌ 18ರಂದು ರಾಷ್ಟ್ರಪತಿ ಭವನದಲ್ಲಿ ನಡೆದ ಉಪಹಾರ ಕೂಟದಲ್ಲಿ ಭಾಗವಹಿಸಿದ್ದ ದುಶ್ಯಂತ್‌ ಸಿಂಗ್‌, ಶುಕ್ರವಾರ ಸ್ವಯಂ ನಿರ್ಬಂಧ ವಿಧಿಸಿಕೊಂಡು ಮನೆಯಲ್ಲೇ ನಿಗಾದಲ್ಲಿ ಇರುವುದಾಗಿ ಘೋಷಿಸಿದ್ದಾರೆ. ಸಂಸದ ದುಶ್ಯಂತ್‌ ಸಿಂಗ್‌ ಜೊತೆ ಅವರ ತಾಯಿ ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೆ ಕೂಡ ಕನಿಕಾ ಕಪೂರ್‌ ಜೊತೆ ಪಾರ್ಟಿಯಲ್ಲಿ ಕಾಣಿಸಿಕೊಂಡಿದ್ದು, ಅವರನ್ನು ಕೂಡ ಹೋಮ್‌ ಐಸೊಲೇಷನ್‌ ನಲ್ಲಿ ಇಡಲಾಗಿದೆ.
ದುಷ್ಯಂತ್‌ ಸಿಂಗ್‌ ಸ್ವಯಂ ನಿರ್ಬಂಧ ವಿಧಿಸಿ ಕೊಂಡಿರುವುದು ಗೊತ್ತಾದ ತಕ್ಷಣ ಟಿಎಂಸಿಯ ಡೆರೆಕ್‌ ಒಬ್ರೆಯನ್‌, ಅಪ್ನಾ ದಳದ ಅನು ಪ್ರಿಯಾ ಪಟೇಲ್‌ ಸೇರಿ ಹಲವರು ಮನೆಯಲ್ಲೇ ಉಳಿದು ಸ್ವಯಂ ನಿರ್ಬಂಧ ವಿಧಿಸಿ ಕೊಂಡಿದ್ದಾರೆ. ಕನಿಕಾ ಕಪೂರ್‌ ಪಾರ್ಟಿಯಲ್ಲಿ ಉತ್ತರ ಪ್ರದೇಶದ ಆರೋಗ್ಯ ಸಚಿವ ಜೈ ಸಿಂಗ್‌, ಬಿಜೆಪಿಯ ವರುಣ್ ಗಾಂಧಿ, ಬಿಜೆಪಿ ನಾಯಕ ಸುಖೇಂದು ಶೇಖರ್ ರಾಯ್ ಸೇರಿದಂತೆ ಅನೇಕರು ಇದ್ದರು ಎಂಬುದು ತಿಳಿದು ಬಂದಿದ್ದು, ಅವರೆಲ್ಲಾ ತಮ್ಮ ಮನೆಗಳಲ್ಲೇ ನಿಗಾದಲ್ಲಿ ಇರಲು ನಿರ್ಧರಿಸಿದ್ದಾರೆ. ಟಿಎಂಸಿಯ ಡೆರೆಕ್‌ ಒಬ್ರೆಯನ್‌ ‘ಕೇಂದ್ರ ಸರ್ಕಾರ ನಮ್ಮೆಲ್ಲರನ್ನೂ ರಿಸ್ಕ್ ಗೆ ಗುರಿಯಾಗಿಸಿದೆ. ಎಲ್ಲರೂ ಮನೆಗಳಲ್ಲಿ ಇರಿ ಎಂದು ಪ್ರಧಾನಿ ಮೋದಿ ಹೇಳಿದ್ದರೂ, ಸಂಸತ್ ಅಧಿವೇಶನ ಮಾತ್ರ ಮುಂದುವರಿದಿದೆ’ ಎಂದು ಕಿಡಿಕಾರಿದ್ದಾರೆ.
ಮಾರ್ಚ್‌ 18 ರಂದು ರಾಷ್ಟ್ರಪತಿ ಭವನದಲ್ಲಿ ನಡೆದ ಉಪಹಾರ ಕೂಟದಲ್ಲಿ 20 ಸಂಸದರು ಪಾಲ್ಗೊಂಡಿದ್ದು, ಎಲ್ಲ ಸಂಸದರನ್ನು ಥರ್ಮಲ್‌ ಚೆಕ್‌ ಅಪ್‌ ಮಾಡಿಯೇ ರಾಷ್ಟ್ರಪತಿ ಭವನದ ಒಳಗಡೆ ಬಿಡಲಾಗಿದೆ ಎಂದು ರಾಷ್ಟ್ರಪತಿ ಭವನದ ಮೂಲಗಳು ತಿಳಿಸಿವೆ.
ಬಾಲಿವುಡ್ ಹಿರಿಯ ನಟ ಅನುಪಮ್ ಖೇರ್ ಕೂಡ ಶುಕ್ರವಾರ ಆಮೆರಿಕಾದಿಂದ ಭಾರತಕ್ಕೆ ಮರಳಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಮನೆಯಲ್ಲಿ ಇರುವುದಾಗಿ ತಿಳಿಸಿದ್ದಾರೆ

Related posts

2029ರಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ನಾನು ಗೃಹಸಚಿವನಾದರೆ RSS ವಿದೇಶಿ ದೇಣಿಗೆ ತನಿಖೆ ಮಾಡಿಸುತ್ತೇನೆ: ಪ್ರಿಯಾಂಕ್ ಖರ್ಗೆ

2029ರಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ನಾನು ಗೃಹಸಚಿವನಾದರೆ RSS ವಿದೇಶಿ ದೇಣಿಗೆ ತನಿಖೆ ಮಾಡಿಸುತ್ತೇನೆ: ಪ್ರಿಯಾಂಕ್ ಖರ್ಗೆ

August 17, 2026
ನನಗೆ ದಿಮಾಗಿ ನಕ್ಸಲ್ ಎನಿಸಿಕೊಳ್ಳಲು ಹೆಮ್ಮೆಯಾಗುತ್ತಿದೆ: ಪ್ರಶ್ನಿಸುವವರನ್ನು ನಕ್ಸಲರೆಂದರೆ ಅದು ನನಗೆ ಸಿಕ್ಕ ಗೌರವ- ಮೋದಿ ಭಾಷಣಕ್ಕೆ ಚಿದಂಬರಂ ಖಡಕ್ ತಿರುಗೇಟು

ನನಗೆ ದಿಮಾಗಿ ನಕ್ಸಲ್ ಎನಿಸಿಕೊಳ್ಳಲು ಹೆಮ್ಮೆಯಾಗುತ್ತಿದೆ: ಪ್ರಶ್ನಿಸುವವರನ್ನು ನಕ್ಸಲರೆಂದರೆ ಅದು ನನಗೆ ಸಿಕ್ಕ ಗೌರವ- ಮೋದಿ ಭಾಷಣಕ್ಕೆ ಚಿದಂಬರಂ ಖಡಕ್ ತಿರುಗೇಟು

August 17, 2026
Tags: #BJPFightCoronaSeriously#BoycottCoronomics#CoronaUpdatesInIndia#Covid_19india#COVIDIOT#IndiaFightCorona#italystaystrong#No_quarantine_in_MANUU#StayHomeSaveLivesdushyant singhkanika kapoorRam Nath Kovindrashtrapathi bhavan
ShareTweetSendShare
Join us on:

Related Posts

2029ರಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ನಾನು ಗೃಹಸಚಿವನಾದರೆ RSS ವಿದೇಶಿ ದೇಣಿಗೆ ತನಿಖೆ ಮಾಡಿಸುತ್ತೇನೆ: ಪ್ರಿಯಾಂಕ್ ಖರ್ಗೆ

2029ರಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ನಾನು ಗೃಹಸಚಿವನಾದರೆ RSS ವಿದೇಶಿ ದೇಣಿಗೆ ತನಿಖೆ ಮಾಡಿಸುತ್ತೇನೆ: ಪ್ರಿಯಾಂಕ್ ಖರ್ಗೆ

by Shwetha
August 17, 2026
0

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಹಾಗೂ ರಾಜ್ಯ ಸರ್ಕಾರದ ನಡುವಿನ ಶೀತಲ ಸಮರ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. 2029ರಲ್ಲಿ ದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದು,...

ನನಗೆ ದಿಮಾಗಿ ನಕ್ಸಲ್ ಎನಿಸಿಕೊಳ್ಳಲು ಹೆಮ್ಮೆಯಾಗುತ್ತಿದೆ: ಪ್ರಶ್ನಿಸುವವರನ್ನು ನಕ್ಸಲರೆಂದರೆ ಅದು ನನಗೆ ಸಿಕ್ಕ ಗೌರವ- ಮೋದಿ ಭಾಷಣಕ್ಕೆ ಚಿದಂಬರಂ ಖಡಕ್ ತಿರುಗೇಟು

ನನಗೆ ದಿಮಾಗಿ ನಕ್ಸಲ್ ಎನಿಸಿಕೊಳ್ಳಲು ಹೆಮ್ಮೆಯಾಗುತ್ತಿದೆ: ಪ್ರಶ್ನಿಸುವವರನ್ನು ನಕ್ಸಲರೆಂದರೆ ಅದು ನನಗೆ ಸಿಕ್ಕ ಗೌರವ- ಮೋದಿ ಭಾಷಣಕ್ಕೆ ಚಿದಂಬರಂ ಖಡಕ್ ತಿರುಗೇಟು

by Shwetha
August 17, 2026
0

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶವನ್ನುದ್ದೇಶಿಸಿ ನೀಡಿದ್ದ ಭಾಷಣದಲ್ಲಿ ಹೇಳಿದ್ದ ದಿಮಾಗಿ ನಕ್ಸಲರು ಅಂದರೆ ಬುದ್ಧಿಜೀವಿ ನಕ್ಸಲರು ಕುರಿತಾದ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ ಹಾಗೂ...

‘ಇದಕ್ಕೇ ಭಂಡರು ಅನ್ನೋದು, ‘ಕಳ್ಳ ದುಡ್ಡು ಮುಚ್ಚಿಡಲು RSS ನೋಂದಣಿ ಮಾಡಿಸ್ತಿಲ್ಲ’: ಬಿಎಲ್ ಸಂತೋಷ್ ಹೇಳಿಕೆಗೆ ಸಚಿವ ಕಾಶಪ್ಪನವರ್ ಕೆಂಡ

‘ಇದಕ್ಕೇ ಭಂಡರು ಅನ್ನೋದು, ‘ಕಳ್ಳ ದುಡ್ಡು ಮುಚ್ಚಿಡಲು RSS ನೋಂದಣಿ ಮಾಡಿಸ್ತಿಲ್ಲ’: ಬಿಎಲ್ ಸಂತೋಷ್ ಹೇಳಿಕೆಗೆ ಸಚಿವ ಕಾಶಪ್ಪನವರ್ ಕೆಂಡ

by Shwetha
August 16, 2026
0

ಬಾಗಲಕೋಟೆ: ಆರ್‌ಎಸ್‌ಎಸ್ ಹಿಂದೆಂದೂ ನೋಂದಣಿಯಾಗಿಲ್ಲ, ಮುಂದೆಯೂ ನೋಂದಣಿ ಆಗುವುದಿಲ್ಲ ಎಂಬ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ಸವಾಲಿನ ಹೇಳಿಕೆಗೆ ರಾಜ್ಯ ಕಾಂಗ್ರೆಸ್...

ಜವಾಬ್ದಾರಿ ಬದಲಾಗಿದೆ, ಗತ್ತು ಬದಲಾಗಿಲ್ಲ!  ‘ನಾನೀಗ ಬರಿ ಎಂಎಲ್‌ಎ, ಸೈಲೆಂಟ್ ಆಗಿಲ್ಲ’: ಸೈಲೆಂಟ್’ ವದಂತಿಗಳಿಗೆ ಸಿದ್ದರಾಮಯ್ಯ ನೀಡಿದ ಮಾಸ್ ರಿಪ್ಲೈ

ಜವಾಬ್ದಾರಿ ಬದಲಾಗಿದೆ, ಗತ್ತು ಬದಲಾಗಿಲ್ಲ! ‘ನಾನೀಗ ಬರಿ ಎಂಎಲ್‌ಎ, ಸೈಲೆಂಟ್ ಆಗಿಲ್ಲ’: ಸೈಲೆಂಟ್’ ವದಂತಿಗಳಿಗೆ ಸಿದ್ದರಾಮಯ್ಯ ನೀಡಿದ ಮಾಸ್ ರಿಪ್ಲೈ

by Shwetha
August 16, 2026
0

ಬೆಂಗಳೂರು: ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಬಳಿಕ ಮಾಜಿ ಸಿಎಂ ಸಿದ್ದರಾಮಯ್ಯ ರಾಜಕೀಯವಾಗಿ ಸೈಲೆಂಟ್ ಆಗಿದ್ದಾರೆ, ಹೈಕಮಾಂಡ್ ನಡೆ ಹಾಗೂ ಮುಂಬರುವ ರಾಜಕೀಯ ಚಟುವಟಿಕೆಗಳ ಬಗ್ಗೆ ತೀವ್ರ ಆಲೋಚನೆಯಲ್ಲಿದ್ದಾರೆ...

ಕೆಂಪುಕೋಟೆಯ ಸ್ವಾತಂತ್ರ್ಯೋತ್ಸವಕ್ಕೆ ಸತತ 2ನೇ ಬಾರಿಯೂ ಗೈರಾದ ರಾಹುಲ್ ಗಾಂಧಿ, ಖರ್ಗೆ: ರಾಷ್ಟ್ರೀಯ ಹಬ್ಬದಲ್ಲೂ ತಾರಕಕ್ಕೇರಿದ ರಾಜಕೀಯ!

ಕೆಂಪುಕೋಟೆಯ ಸ್ವಾತಂತ್ರ್ಯೋತ್ಸವಕ್ಕೆ ಸತತ 2ನೇ ಬಾರಿಯೂ ಗೈರಾದ ರಾಹುಲ್ ಗಾಂಧಿ, ಖರ್ಗೆ: ರಾಷ್ಟ್ರೀಯ ಹಬ್ಬದಲ್ಲೂ ತಾರಕಕ್ಕೇರಿದ ರಾಜಕೀಯ!

by Shwetha
August 16, 2026
0

ನವದೆಹಲಿ: ದೆಹಲಿಯ ಐತಿಹಾಸಿಕ ಕೆಂಪುಕೋಟೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಅದ್ದೂರಿಯಾಗಿ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram