ಬೆಂಗಳೂರು: ಆಘಾತಕಾರಿ ಬೆಳವಣಿಗೆಯೊಂದರಲ್ಲಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೊರೊನಾ ಸೋಂಕಿತ ರೋಗಿ ಆಸ್ಪತ್ರೆ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ 50 ವರ್ಷದ ರೋಗಿ ಸಂಖ್ಯೆ 466 ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಕಟ್ಟಡದ ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಸದ್ಯ ಸ್ಥಳಕ್ಕೆ ವಿವಿ ಪುರಂ ಠಾಣೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.
ಇನ್ನು ಈ ವ್ಯಕ್ತಿ ಬೆಂಗಳೂರು ತಿಲಕ್ ನಗರ ನಿವಾಸಿಯಾಗಿದ್ದು ಅಣ್ಣನ ಮನೆಯಲ್ಲಿ ನೆಲೆಸಿದ್ದ ಎನ್ನುವುದು ತಿಳಿದು ಬಂದಿದೆ.