ಚಿಕ್ಕಮಗಳೂರು : ಕಾಫಿನಾಡು ಚಿಕ್ಕಮಗಳೂರಿನಲ್ಲಿ ಇಂದು ಕೊರೊನಾ ರೌದ್ರಾವತಾರವನ್ನೇ ತಾಳಿದೆ. ಇಂದು ಒಂದೇ ದಿನ ಜಿಲ್ಲೆಯಲ್ಲಿ ಹೊಸದಾಗಿ 229 ಹೊಸ ಪ್ರಕರಣಗಳು ದಾಖಲಾಗಿದೆ. ಇನ್ನೂ ಇದೇ ಮೊದಲ ಬಾರಿ ಜಿಲ್ಲೆಯಲ್ಲಿ ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಪ್ರಕರಣಗಳು ದೃಢಪಟ್ಟಿರುವುದು ಜನರ ಆತಂಕಕ್ಕೆ ಕಾರಣವಾಗಿದೆ. ಜಿಲ್ಲೆಯಲ್ಲಿ ಒಟ್ಟು 1154 ಸಕ್ರಿಯ ಪ್ರಕರಣಗಳಿದ್ದು ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 3477ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಈವರೆಗೆ 61 ಮಂದಿ ಕಿಲ್ಲರ್ ಕೊರೊನಾಗೆ ಉಸಿರು ನಿಲ್ಲಿಸಿದ್ದಾರೆ. ಇಂದು 65 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಂದು ಪತ್ತೆಯಾದ ಸೋಂಕಿತರ ಪೈಕಿ ಚಿಕ್ಕಮಗಳೂರು 83, ಕಡೂರು 65, ತರೀಕೆರೆ 50, ಮೂಡಿಗೆರೆ 12, ಎನ್.ಆರ್.ಪುರ 3, ಶೃಂಗೇರಿ 10, ಕೊಪ್ಪದಲ್ಲಿ 6 ಪ್ರಕರಣಗಗಳು ವರದಿಯಾಗಿವೆ.