ಹಾವೇರಿ : ಹಾವೇರಿಯಲ್ಲಿ ಕೊರೊನಾ ಹಾವಳಿ ಮುಂದುವರೆದಿದೆ. ಇಂದು ಒಂದೇ ದಿನ ಜಿಲ್ಲೆಯಲ್ಲಿ ಕೊರೊನಾ ಸ್ಪೋಟವಾಗಿದ್ದು, ಹೊಸದಾಗಿ 96 ಪಾಸಿಟಿವ್ ಪ್ರಕರಣಗಳು ಬೆಳಕಿಗೆ ಬಂದಿದೆ. ಇನ್ನೂ ಕಿಲ್ಲರ್ ಕೊರೊನಾಗೆ ಜಿಲ್ಲೆಯಲ್ಲಿ ಇಂದು ಒಂದೇ ದಿನ ಮೂರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಪತ್ತೆಯಾದ ಸೋಂಕಿತರ ಸಂಖ್ಯೆ 2153ಕ್ಕೆ ಏರಿಕೆಯಾಗಿದೆ.
ಇನ್ನೂ ಜಿಲ್ಲೆಯಲ್ಲಿ ಕೊರೊನಾ ಮಹಾಮಾರಿಗೆ ಬಲಿಯಾದವರ ಸಂಖ್ಯೆ 46ಕ್ಕೆ ಬಂದು ತಲುಪಿದೆ. ಇತ್ತ ಗುಣಮುಖರ ಸಂಖ್ಯೆಯಲ್ಲು ಸುಧಾರಣೆ ಕಂಡಿದ್ದು, ಒಂದೇ ದಿನ 195 ಜನ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿತಿಂದ ಗುಣಮುಖರಾದವರ ಸಂಖ್ಯೆ 1474ಕ್ಕೆ ಬಂದು ನಿಂತಿದೆ . ಇನ್ನೂವರೆಗೂ ಜಿಲ್ಲೆಯಲ್ಲಿ ಒಟ್ಟು 633 ಸಕ್ರಿಯ ಕೊರೊನಾ ಪ್ರಕರಣಗಳಿವೆ.








