ಭಾರತದಲ್ಲಿ ದಿನೇ ದಿನೇ ಡೆಡ್ಲಿ ವೈರಸ್ ಕೊರೊನಾ ಹಾವಳಿ ಹೆಚ್ಚಾಗುತ್ತಲೇ ಇದೆ. ದಿನ ಕಳೆದಂತೆಲ್ಲಾ ಸೋಂಕಿತರ ಸಂಖ್ಯೆ ವೇಗವಾಗಿ ಏರಿಕೆಯಾಗಗುತ್ತಲೇ ಇರುವುದು ಆತಂಕಕ್ಕೆ ಕಾರಣವಾಗಿದೆ. ಇತ್ತ ಕಳೆದ 24 ಗಂಟೆಗಳಲ್ಲೇ ದೇಶದಲ್ಲಿ ಹೊಸದಾಗಿ 69,239 ಮಂದಿಗೆ ಸೋಂಕು ತಗುಲಿರುವುದು ದೃಢವಾಗಿದೆ. ಇನ್ನೂ ಈ ಮೂಲಕ ಭಾರತದಲ್ಲಿ ಸೋಂಕಿತರ ಸಂಖ್ಯೆ 30 ಲಕ್ಷದ ಗಡಿ ದಾಟಿದೆ.
ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 30,44,941 ಕ್ಕೆ ಏರಿಕೆಯಾಗಿದೆ. ಇನ್ನೂ ಒಂದೇ ದಿನ 912 ಮಂದಿ ಮಹಾಮಾರಿಗೆ ಪ್ರಾಣ ಚೆಲ್ಲಿದ್ದಾರೆ. ಈ ಮೂಲಕ ದೇಶದಲ್ಲಿ ಮಾರಕ ಕೊರೊನಾಗೆ ಬಲಿಯಾದವರ ಒಟ್ಟು ಸಂಖ್ಯೆ 56,706ಕ್ಕೆ ಬಂದು ತಲುಪಿದೆ. ಇನ್ನೂ ಈಈವರೆಗೂ ಒಟ್ಟು 22,80,567 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, 7,07,668 ಸಕ್ರಿಯ ಕೇಸ್ ಗಳಿವೆ.









