ಬಳ್ಳಾರಿ- ಗಣಿನಾಡು ಬಳ್ಳಾರಿಯಲ್ಲಿ ಕೊರೊನಾ ವಾರಿಯರ್ ಗೆ ಕೊರೊನಾ ಸೋಂಕು ತಗುಲಿದೆ. ಕೊವೀಡ್ ಆಸ್ಪತ್ರೆಯ ಐಸೋಲೇಷನ್ ವಾರ್ಡ್ ನಲ್ಲಿ ಕೆಲಸ ಮಾಡುತ್ತಿದ್ದ ಆಸ್ಪತ್ರೆಯ ಪುರುಷ ಸಿಬ್ಬಂದಿಗೆ ಸೋಂಕು ಧೃಡವಾಗಿದೆ. ಆ ಮೂಲಕ ಜಿಲ್ಲೆಯಲ್ಲಿ ಮೊದಲ ಬಾರಿಗೆ ಕೊರೊನಾ ವಾರಿಯರ್ ಗೆ ಸೋಂಕು ಪತ್ತೆಯಾಗಿದೆ. ನಿನ್ನೆಯಷ್ಟೇ 15 ಜನ ಸಿಬ್ಬಂದಿಗಳ ಗಂಟಲು ದ್ರವ ಮತ್ತು ರಕ್ತದ ಮಾದರಿ ಸಂಗ್ರಹಿಸಿ ಪರೀಕ್ಷೆ ಮಾಡಲಾಗಿತ್ತು.
ಅದರಲ್ಲಿ 14 ಜನರ ವರದಿ ನೆಗಟಿವ್ ಬಂದಿದೆ. ಒಬ್ಬ ಸಿಬ್ಬಂದಿಯ ವರದಿ ಮಾತ್ರ ಪಾಸಿಟಿವ್ ಬಂದಿದೆ. ಡಿ ಗ್ರೂಪ್ ನೌಕರನಾದ ಸೋಂಕಿತ ವ್ಯಕ್ತಿ ಕೊರೊನಾ ಪಾಸಿಟಿವ್ ವಾರ್ಡ್ ನಲ್ಲಿ 14 ದಿನ ಕೆಲಸ ಮಾಡಿದ್ದರು. ಹಾಗಾಗಿ ಸ ಸಿಬ್ಬಂದಿಗೆ ಟೆಸ್ಟ್ ಮಾಡಲಾಗಿತ್ತು. ಟೆಸ್ಟ್ ಮಾಡಿದ ಮೇಲೆ ಪಾಸಿಟಿವ್ ಕೇಸ್ ಪತ್ತೆಯಾಗಿದೆ. ಅಲ್ಲದೆ ಸೋಂಕಿತ ಸಿಬ್ಬಂದಿ 8 ಜನರ ಜೊತೆ ಸಂಪರ್ಕ ಹೊಂದಿದ್ದರು. ಹಾಗಾಗಿ ಆ 8 ಜನರನ್ನು ಕ್ವಾರೆಂಟೈನ್ ಮಾಡಲಾಗಿದೆ ಎಂದು ಆರೋಗ್ಯ ಇಲಾಖೆಯ ಉನ್ನತ ಮೂಲಗಳು ತಿಳಿಸಿವೆ.








