ದೇಶದಲ್ಲಿ Corona ಕೊರೊನಾ ಅಬ್ಬರ : ನಿನ್ನೆ 2,59,170 ಜನರಲ್ಲಿ ಕೊರೊನಾ ಪಾಸಿಟಿವ್
ನವದೆಹಲಿ : ದೇಶದಲ್ಲಿ ಕೊರೊನಾ ಎರಡನೇ ಅಲೆಯ ತಾಂಡವ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 2,59,170 ಜನರಲ್ಲಿ ಸೋಂಕು ಪತ್ತೆಯಾಗಿದೆ.
ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,53,21,089ಕ್ಕೆ ಏರಿಕೆಯಾಗಿದೆ.
ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ, ನಿನ್ನೆ 15,19,486 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ಇದರಲ್ಲಿ 2,59,170 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ.
ಅಲ್ಲದೆ ಇದೇ ಅವಧಿಯಲ್ಲಿ 1,761 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,80,530ಕ್ಕೆ ಏರಿಕೆಯಾಗಿದೆ.
ದೇಶದ ಒಟ್ಟು ಸೋಂಕಿತರ ಪೈಕಿ 1,31,08,582 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿನ್ನೂ 20,31,977 ಕೋವಿಡ್ ಸಕ್ರಿಯ ಪ್ರಕರಣಗಳಿವೆ.