ನವದೆಹಲಿ : ಭಾರತದಲ್ಲಿ ಮಹಾಮಾರಿ ಕೊರೊನಾ ಆರ್ಭಟ ಮುಂದುವರಿದಿದ್ದು, ಇಂದೂ ಸಹ 3 ಸಾವಿರಕ್ಕೂ ಹೆಚ್ಚು ಮಂದಿ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ಕಳೆದ 4 ದಿನಗಳಿಂದ ಪ್ರತಿನಿತ್ಯ 3 ಸಾವಿರಕ್ಕೂ ಹೆಚ್ಚು ಮಂದಿಯಲ್ಲಿ ಕೊರೊನಾ ಪಾಸಿಟಿವ್ ಬರುತ್ತಿದ್ದು, ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಂಕಿ ಅಂಶಗಳ ಪ್ರಕಾರ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 60 ಸಾವಿರದ ಗಡಿ ದಾಟಿದೆ.
ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ ಒಟ್ಟು 3,277 ಮಂದಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಇನ್ನು, 127 ಮಂದಿ ಮಹಾಮಾರಿಯಿಂದ ಮೃತಪಟ್ಟಿದ್ದಾರೆ.
ಇಂದು ಬಿಡುಗಡೆಯಾಗಿರುವ ಅಂಕಿ ಅಂಶಗಳು
ಹೊಸ ಪ್ರಕರಣಗಳು-3,277
24 ಗಂಟೆಗಳಲ್ಲಿ ಮೃತಪಟ್ಟವರು-127
ಒಟ್ಟಾರೆ ಪ್ರಕರಣಗಳು-62,939
ಸಕ್ರಿಯ ಪ್ರಕರಣಗಳು-41,472
ಗುಣಮುಖರಾದವರು-19,358
ಒಟ್ಟು ಮೃತಪಟ್ಟವರು-2,109








