Corona ರಾಜ್ಯದಲ್ಲಿ ಇಂದು 9579 ಜನರಿಗೆ ಕೊರೊನಾ ಪಾಸಿಟಿವ್
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮುಂದುವರಿದಿದ್ದು, ಇಂದು ಹೊಸದಾಗಿ 9579 ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಇದೇ ಅವಧಿಯಲ್ಲಿ 52 ಮಂದಿ ಹೆಮ್ಮಾರಿ ಕೊರೊನಾಗೆ ಮೃತಪಟ್ಟಿದ್ದಾರೆ.
ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 9579 ಮಂದಿಗೆ ಕೊರೊನಾ ಸೋಂಕಿ ತಗುಲಿದ್ದು, 52 ಮಂದಿ ಹೆಮ್ಮಾರಿಗೆ ಬಲಿಯಾಗಿದ್ದಾರೆ.
ಇದರೊಂದಿಗೆ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 10,74,869 ಕ್ಕೆ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 12,941 ಕ್ಕೆ ಏರಿಕೆಯಾಗಿದೆ.
ಇನ್ನು ರಾಜ್ಯದಲ್ಲಿ ಇಂದು 2767 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 9,85,924 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿನ್ನೂ 75,985 ಸಕ್ರಿಯ ಪ್ರಕರಣಗಳಿವೆ.
ಇವತ್ತು ಬೆಂಗಳೂರಿನಲ್ಲಿ ಒಂದೇ ದಿನ 6387 ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ.










