ಬೆಂಗಳೂರು : ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎರಡು ತಿಂಗಳ ಹಿಂದೆ ರೇವಣ್ಣನವರ ಬೆಂಗಾವಲು ಪಡೆಯ 9 ಜನ ಪೊಲೀಸರಿಗೆ ಕೊರೊನಾ ಪರೀಕ್ಷೆ ಮಾಡಲಾಗಿತ್ತು. ಅವರಲ್ಲಿ ನಾಲ್ವರಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಈ ಸಂದರ್ಭದಲ್ಲಿ ಅವರಿಗೆ ಪರೀಕ್ಷೆ ನಡೆಸಿದಾಗ ನೆಗೆಟಿವ್ ಬಂದಿತ್ತು.
ಆಗಸ್ಟ್ 25 ರಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಅರಸೀಕೆರೆ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಎಂ. ಶಿವಲಿಂಗೇಗೌಡ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು.