ಧಾರವಾಡದಲ್ಲಿ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ Corona
ಧಾರವಾಡ : ಕಳೆದ ವಾರ ಧಾರವಾಡದ ಎಸ್ ಡಿಎಂ ಇಂಜಿನಯರಿಂಗ್ ಕಾಲೇಜು ಹಾಗೂ ಹುಬ್ಬಳ್ಳಿಯ ವಿದ್ಯಾನಿಕೇತನ ಕಾಲೇಜಿನ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿತ್ತು. ಇದೀಗ ವಿದ್ಯಾಕಾಶಿಯಲ್ಲಿ ವಿದ್ಯಾರ್ಥಿಗಳಲ್ಲಿ ಕೊರೊನಾ ಸೊಂಕು ಹೆಚ್ಚು ಕಂಡು ಬಂದಿದೆ.
ಸಪ್ತಾಪುರದಲ್ಲಿರುವ ಗೌರಿಶಂಕರ ಹಾಸ್ಟೆಲ್ ನ 10, ಕೆಸಿಡಿ ಕಾಲೇಜಿನಲ್ಲಿರುವ ಕಾವೇರಿ ಹಾಸ್ಟೆಲ್ ನಲ್ಲಿ 7 ಹಾಗೂ ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ 13 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕಿರುವುದು ದೃಢಪಟ್ಟಿದೆ.
ಈ ಹಿನ್ನೆಲೆ ಜಿಲ್ಲಾಡಳಿತ ಎಲ್ಲ ವಿದ್ಯಾರ್ಥಿಗಳಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ್ದು, ಹಾಸ್ಟೆಲ್ ಗಳಲ್ಲಿರುವ ಕೊರೊನಾ ಸೋಂಕಿತ ವಿದ್ಯಾರ್ಥಿಗಳಿಗೆ ಅಲ್ಲೇ ಐಸೋಲೇಷನ್ ಮಾಡಿದೆ. ರೋಗಲಕ್ಷಣ ಕಂಡು ಬಂದರೆ ಮಾತ್ರ ಅವರಿಗೆ ಆಸ್ಪತ್ರೆಗೆ ಕಳಿಸುವ ಕೆಲಸ ನಡೆದಿದೆ.