ಸತತ 12 ದಿನಗಳಿಂದ ಯಾವುದೇ ಕೊರೊನಾ ಪ್ರಕರಣಗಳಿಲ್ಲದೆ ನಿರಾಳವಾಗಿದ್ದ ದ.ಕ.ದಲ್ಲಿ ಇದೀಗ ಮತ್ತೊಂದು ಪ್ರಕರಣ ವರದಿಯಾಗಿದೆ, ದೆಹಲಿಯಿಂದ ಹಿಂತಿರುಗಿದ್ದ ಉಪ್ಪಿನಂಗಡಿಯ ಯುವಕನಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಜನರನ್ನು ಆತಂಕಕ್ಕೆ ದೂಡಿದೆ.
ದೆಹಲಿಯಿಂದ ಮಾರ್ಚ್ 28ರಂದು ಹಿಂತಿರುಗಿದ್ದ 39 ವರ್ಷದ ಯುವಕನನ್ನು 14 ದಿನಗಳ ಕಾಲ ಕ್ವಾರೆಂಟೈನ್ ನಲ್ಲಿ ಇಡಲಾಗಿತ್ತು. ಏಪ್ರಿಲ್ 2 ರಂದು ಆತನನ್ನು ಗಂಟಲು ದ್ರವ ಪರೀಕ್ಷೆಗೆ ಒಳಪಡಿಸಿದ್ದು, ಆಗ ಬಂದ ವರದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿರಲಿಲ್ಲ. ಏಪ್ರಿಲ್ 13ರಂದು ಎರಡನೇ ಬಾರಿ ಆತನನ್ನು ಗಂಟಲು ದ್ರವ ಪರೀಕ್ಷೆಗೆ ಒಳಪಡಿಸಿದ್ದು, ಇಂದು ಬಂದಿರುವ ವರದಿ ಆತನಿಗೆ ಕೊರೊನಾ ಸೋಂಕು ಇರುವುದನ್ನು ದೃಢಪಡಿಸಿದೆ. ಕೂಡಲೇ ಯುವಕನನ್ನು ವೆನ್ ಲಾಕ್ ಆಸ್ಪತ್ರೆಗೆ ಸ್ಥಳಾಂತರಿಸಿ ಚಿಕಿತ್ಸೆ ಮುಂದುವರಿಸಲಾಗಿದೆ.
ದಕ್ಷಿಣ ಕನ್ನಡದಲ್ಲಿ 12 ದಿನಗಳಿಂದ ಯಾವುದೇ ಪ್ರಕರಣ ಕಂಡುಬಂದಿರಲಿಲ್ಲ. ಇದೀಗ 13ನೇ ದಿನದಲ್ಲಿ 13ನೇ ಪ್ರಕರಣ ಪತ್ತೆಯಾಗಿದೆ. ಈ ಮೊದಲು 12 ಕೊರೋನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ 9 ಮಂದಿ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.
ಅರವಿಂದ ಅವೇಂಜರ್ಸ್‌ಗೆ ಬಿ ಝೆಡ್ ಕಪ್ ಮೀಡಿಯಾ ಕ್ರಿಕೆಟ್ ಟ್ರೋಫಿ
ಬೆಂಗಳೂರು: ಅಮೋಘ ಆಟ ಪ್ರದರ್ಶಿಸಿದ ಅರವಿಂದ ಅವೇಂಜರ್ಸ್ ತಂಡವು ಬಿ ಝೆಡ್ ಕಪ್ ಮೀಡಿಯಾ ಕ್ರಿಕೆಟ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. 9ಡ್ರೀಮ್ಸ್ ಸಂಸ್ಥೆ ಆಯೋಜಿಸಿದ್ದ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ...








