ಶಿವಮೊಗ್ಗ : ಸಿಎಂ ಬಿಎಸ್ ವೈ , ಸಿದ್ದರಾಮಯ್ಯ, ಡಿಕೆಶಿ, ಹೀಗೆ ರಾಜ್ಯದ ಅನೇಕ ಜನಪ್ರತಿನಿಧಿಗಳಿಗೆ ಶಾಕ್ ನೀಡಿದ್ದ ಕೊರೋನಾ ಮಹಾಮಾರಿ ಇದೀಗ ಸಚಿವ ಕೆ ಎಸ್ ಈಶ್ವರಪ್ಪ ಅವರಿಗೂ ವಕ್ಕರಿಸಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ ಎಸ್ ಈಶ್ವರಪ್ಪಗೂ ಕೊರೋನಾ ಪಾಸಿಟಿವ್ ಬಂದಿರುವುದು ದೃಢಪಟ್ಟಿದೆ. ಈ ಬಗ್ಗೆ ಈಶ್ವರಪ್ಪ ಅವರು ಮಾಹಿತಿ ಹಂಚಿಕೊಂಡಿದ್ದು, ನನಗೆ ಕೊರೋನಾ ಪಾಸಿಟಿವ್ ಬಂದಿರುವುದು ಪರೀಕ್ಷೆಯಿಂದ ದೃಢಪಟ್ಟಿದೆ. ನನ್ನ ಸಂಪರ್ಕದಲ್ಲಿರುವವರು ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿಕೊಂಡಿದ್ದಾರೆ.