ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೊರೊನಾ ಪಾಸಿಟಿವ್ BS Yeddyurappa
ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮತ್ತೆ ಕೊರೊನಾ ಸೋಂಕು ದೃಢಪಟ್ಟಿದೆ. ಕಳೆದ ಎರಡು ದಿನಗಳಿಂದ ಸಿಎಂ ಬಿಎಸ್ ವೈ ಜ್ವರದಿಂದ ಬಳಲುತ್ತಿದ್ದರು.
ಈ ಹಿನ್ನೆಲೆ ಅವರಿಗೆ ಕೊರೊನಾ ಟೆಸ್ಟ್ ಮಾಡಿಸಲಾಗಿದ್ದು, ಇದೀಗ ಕೊರೊನಾ ಪಾಸಿಟಿವ್ ಬಂದಿದೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, “ಜ್ವರದ ಹಿನ್ನೆಲೆಯಲ್ಲಿ ಇಂದು ತಪಾಸಣೆಗೆ ಒಳಪಟ್ಟಾಗ ಕೋವಿಡ್ ಪರೀಕ್ಷಾ ವರದಿ ಪಾಸಿಟಿವ್ ಬಂದಿದೆ.
ಅಲ್ಪ ಪ್ರಮಾಣದಲ್ಲಿ ರೋಗ ಲಕ್ಷಣಗಳಿರುವುದರಿಂದ ವೈದ್ಯರ ಸಲಹೆಯಂತೆ ಮಣಿಪಾಲ್ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ.
ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿದ್ದವರು ಕ್ವಾರಂಟೈನ್ ನಲ್ಲಿದ್ದು, ಒಮ್ಮೆ ಪರೀಕ್ಷಿಸಿಕೊಳ್ಳಿ ಎಂದು ಕೋರುತ್ತೇನೆ” ಎಂದು ಬರೆದುಕೊಂಡಿದ್ದಾರೆ.
ಅಂದಹಾಗೆ ಸಿಎಂ ಬಿ.ಎಸ್.ವೈ ಕಳೆದ ಎರಡು ದಿನಗಳಿಂದ ಉಪಚುನಾವಣೆ ಕಣದಲ್ಲಿ ಭರ್ಜರಿ ಪ್ರಚಾರ ನಡೆಸಿದ್ದಾರೆ.
ರೋಡ್ ಶೋಗಳನ್ನ ನಡೆಸಿದ್ದಾರೆ. ಈ ಹಿನ್ನೆಲೆ ಅವರೊಂದಿಗೆ ಇದ್ದವರಿಗೆ ಈಗ ಢವ ಢವ ಶುರುವಾಗಿದೆ.