ಮೈಸೂರು : ದೇಶದಲ್ಲಿ ಮತ್ತೆ ಲಾಕ್ ಡೌನ್ ಆಗಲಿದೆ ಎಂಬ ಚರ್ಚೆ ಸೋಶಿಯಲ್ ಮೀಡಿಯಾದಲ್ಲಿ ಜೋರಾಗಿದ್ದು, ಈ ಬಗ್ಗೆ ಮಾತನಾಡಿರುವ ಸಚಿವ ನಾರಾಯಣ ಗೌಡ, ಕರ್ನಾಟಕದಲ್ಲಿ ಮತ್ತೊಮ್ಮೆ ಲಾಕ್ ಡೌನ್ ಮಾಡಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದೆ. ಆದರೆ ಕೊರೊನಾ ಸಾಮರ್ಥ್ಯ ಕುಗ್ಗಿದೆ. ವೈದ್ಯರು ಹೇಳುವ ಪ್ರಕಾರ ಕೋವಿಡ್-19 ವೈರಸ್ ಪವರ್ ಕಡಿಮೆ ಆಗಿದೆ. ಹೀಗಾಗಿ ಮತ್ತೆ ಲಾಕ್ ಡೌನ್ ಮಾಡುವ ಅವಶ್ಯಕತೆ ಇಲ್ಲ. ಕೋವಿಡ್ ನಿಯಂತ್ರಣ ಮಾಡಲು ನಮ್ಮ ಸರ್ಕಾರ ಎಲ್ಲ ಕ್ರಮ ತೆಗದುಕೊಂಡಿದೆ. ಇದಕ್ಕಾಗಿ ಮುಖ್ಯಂತ್ರಿಗಳಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ಇದೇ ವೇಳೆ ಕೆ ಆರ್ ಎಸ್ ನಲ್ಲಿ ಪ್ರತಿಮೆ ನಿರ್ಮಾಣದ ಬಗ್ಗೆ ಮಾತನಾಡಿದ ಅವರು, ಈ ಬಗ್ಗೆ ರಾಜವಂಶಸ್ಥರ ಅಭಿಪ್ರಾಯ ಸಂಗ್ರಹ ಮಾಡುತ್ತೇವೆ. ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರನ್ನು ಭೇಟಿ ಮಾಡುತ್ತೇವೆ. ರಾಜ್ಯಕ್ಕೆ ಮೈಸೂರು ಅರಸರ ಕೊಡುಗೆ ಅಪಾರವಾಗಿದೆ. ಹಾಗೆ ವಿಶ್ವೇಶ್ವರಯ್ಯ ಅವರ ಕೊಡುಗೆ ನೀಡಿದ್ದಾರೆ. ಅವರ ಕೊಡುಗೆ ಏನು ಎಂಬುದು ಎಲ್ಲರಿಗೂ ಗೊತ್ತಿದೆ. ಎರಡು ಮೂರು ದಿನಗಳಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ನಾರಾಯಣ ಗೌಡ ತಿಳಿಸಿದರು.








