ಕೊರೊನಾ Corona ರಿಪೋರ್ಟ್ | ಕಳೆದ 24 ಗಂಟೇಲಿ 1,14,460 ಮಂದಿಗೆ ಸೋಂಕು
ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ನ ಆರ್ಭಟ ಇಳಿಮುಖವಾಗಿದ್ದು, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 1,14,460 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಇದು ಕಳೆದ 59ನೇ ದಿನದಲ್ಲಿ ಪತ್ತೆಯಾದ ಕನಿಷ್ಟ ಸಂಖ್ಯೆ ಇದಾಗಿದೆ.
ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ ಭಾನುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 1,14,460 ಕೋವಿಡ್ ಕೇಸ್ ಗಳು ಪತ್ತೆಯಾಗಿವೆ. ಇದೇ ಅವಧಿಯಲ್ಲಿ 2677 ಮಂದಿ ಸಾವನ್ನಪ್ಪಿದ್ದಾರೆ.
ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,88,09,339ಕ್ಕೆ ಏರಿಕೆಯಾಗಿದ್ದು, ಒಟ್ಟು ಸಾವಿಗೀಡಾದವರ ಸಂಖ್ಯೆ 3,46,759ಕ್ಕೆ ತಲುಪಿದೆ.
ದೇಶದಲ್ಲಿನ್ನೂ 14,77,799 ಸಕ್ರಿಯ ಪ್ರಕರಣಗಳಿವೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 1,89,232 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 2,69,84,781ಕ್ಕೆ ತಲುಪಿದೆ.