ಕೊರೊನಾ ರಿಪೋರ್ಟ್ : ದೇಶದಲ್ಲಿ 1,27,510 ಮಂದಿಗೆ ಸೋಂಕು Corona
ನವದೆಹಲಿ : ದೇಶದಲ್ಲಿ ಕೊರೊನಾ ಅಬ್ಬರ ಕಡಿಮೆಯಾಗಿದ್ದು, ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 1,27,510 ಹೊಸ ಕೊವಿಡ್ -19 ಪ್ರಕರಣಗಳು ಪತ್ತೆಯಾಗಿವೆ.
ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ ದೇಶದಲ್ಲಿ ನಿನ್ನೆ 1,27,510 ಮಂದಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.
ಇದೇ ಅವಧಿಯಲ್ಲಿ 2,795 ಮಂದಿ ಹೆಮ್ಮಾರಿ ಕೊರೊನಾ ವೈರಸ್ ಗೆ ಬಲಿಯಾಗಿದ್ದಾರೆ.
ಇದರೊಂದಿಗೆ ದೇಶದಲ್ಲಿ ಒಟ್ಟು ಕೊರೊನಾವೈರಸ್ ಪ್ರಕರಣಗಳ ಸಂಖ್ಯೆ 2,81,75,044 ಆಗಿದ್ದು, ಸಾವಿನ ಸಂಖ್ಯೆ 3,31,895 ಕ್ಕೆ ತಲುಪಿದೆ.
ಪ್ರಸ್ತುತ ದೇಶದಲ್ಲಿ 18,95,520 ಸಕ್ರಿಯ ಪ್ರಕರಣಗಳಿದ್ದು, 2,59,47,629 ಜನರು ಈ ಕಾಯಿಲೆಯಿಂದ ಚೇತರಿಸಿಕೊಂಡಿದ್ದಾರೆ.