ಕೊರೊನಾ ರಿಪೋರ್ಟ್ : ಕಳೆದ 24 ಗಂಟೇಲಿ 15,981 ಕೇಸ್ ಪತ್ತೆ Corona Report saaksha tv
ನವದೆಹಲಿ : ಭಾರತದಲ್ಲಿ ಮಹಾಮಾರಿ ಕೊರೊನಾ ಸೋಂಕಿನ ಏರಿಳಿತ ಮುಂದುವರೆದಿದ್ದು, ಕಳೆದ 24 ತಾಸುಗಳ ಅವಧಿಯಲ್ಲಿ ದೇಶದಾದ್ಯಂತ 15,981 ಕೊರೊನಾ ಪ್ರಕರಣಗಳು ದೃಢಪಟ್ಟಿವೆ. ಇದೇ ಅವಧಿಯಲ್ಲಿ 166 ಮಂದಿ ಸಾವನ್ನಪ್ಪಿದ್ದಾರೆ.
ಇದರೊಂದಿಗೆ ದೇಶದಲ್ಲಿ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ 3,40,53,573ಕ್ಕೆ ತಲುಪಿದೆ.
ಹೆಮ್ಮಾರಿ ಸೋಂಕಿಗೆ ಕೊನೆಯುಸಿರೆಳೆದವರ ಸಂಖ್ಯೆ 4,51,980ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಈ ಮಧ್ಯೆ ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ ಹೆಮ್ಮಾರಿ ಸೋಂಕಿನಿಂದ 17,861 ಮಂದಿ ಗುಣಮುಖರಾಗಿದ್ದು, ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.
ಇದರೊಂದಿಗೆ ದೇಶದಲ್ಲಿ ಈವರೆಗೂ 3,33,99,961 ಮಂದಿ ಸೋಂಕಿನಿಂದ ಚೇತರಿಸಿಕೊಂಡಂತಾಗಿದೆ.
ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2,01,632ಕ್ಕೆ ತಲುಪಿದೆ.









