ಕೊರೊನಾ ರಿಪೋರ್ಟ್ : ಕಳೆದ 24 ಗಂಟೇಲಿ 18,454 ಕೇಸ್ ಪತ್ತೆ Corona Report saaksha tv
ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿನ ಏರಿಳಿತ ಮುಂದುವರೆದಿದೆ.
ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 18,454 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.
ಅಲ್ಲದೆ 160 ಮಂದಿ ಸೋಂಕಿನಿಂದ ಕೊನೆಯುಸಿರೆಳೆದಿದ್ದಾರೆ.
ಇದರೊಂದಿಗೆ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ 3,41,27,450ಕ್ಕೆ ತಲುಪಿದೆ.
ಸೋಂಕಿನಿಂದ ಮೃತರಾದವರ ಸಂಖ್ಯೆ 4,52,811ಕ್ಕೆ ತಲುಪಿದೆ.
ಇನ್ನು ದೇಶದಲ್ಲಿ ಇನ್ನೂ ಸಕ್ರಿಯ ಪ್ರಕರಣಗಳ ಸಂಖ್ಯೆ 1,78,831ಕ್ಕೆ ಏರಿಕೆಯಾಗಿದೆ.
ಬುಧವಾರ 12,47,506 ಪರೀಕ್ಷೆಗಳನ್ನು ನಡೆಸಲಾಗಿದ್ದು, ದೇಶದಲ್ಲಿ ಕೋವಿಡ್ ಪತ್ತೆಗಾಗಿ ನಡೆಸಿದ ಒಟ್ಟು ಪರೀಕ್ಷೆಗಳ ಸಂಖ್ಯೆ 59,57,42,218ಕ್ಕೆ ತಲುಪಿದೆ.