ಕೊರೊನಾ ರಿಪೋರ್ಟ್ : ಕಳೆದ 24 ಗಂಟೆಗಳಲ್ಲಿ 2,40,842 ಮಂದಿಗೆ ಸೋಂಕು
ನವದೆಹಲಿ : ದೇಶದಲ್ಲಿ ದಿನಕಳೆಯುತ್ತಿದ್ದಂತೆ ಕೊರೊನಾ ಆರ್ಭಟ ತಗ್ಗುತ್ತಿರುವ ಲಕ್ಷಣಗಳು ಕಾಣುತ್ತಿವೆ.
ಕಳೆದ 24 ಗಂಟೆಯಲ್ಲಿ ದೇಶದಲ್ಲಿ 2,40,842 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದೆ.
3,55,102 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ, ದೇಶದಲ್ಲಿ ನಿನ್ನೆ 2,40,842 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 3,741 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಇದರೊಂದಿಗೆ ದೇಶದಲ್ಲಿ ಒಟ್ಟು ಕೋವಿಡ್ ಸೋಂಕಿತರ ಸಂಖ್ಯೆ 2,65,30,132 ಕ್ಕೆ ಏರಿಕೆಯಾಗಿದೆ. ಇದುವರೆಗೆ 2,99,266 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಇನ್ನು ನಿನ್ನೆ 3,55,102 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಇದುವರೆಗೆ 2,34,25,467 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿನ್ನೂ 28,05,399 ಸಕ್ರಿಯ ಪ್ರಕರಣಗಳಿವೆ.