ಕೊರೊನಾ ರಿಪೋರ್ಟ್ : 24 ಗಂಟೇಲಿ 2,63,533 ಮಂದಿಗೆ ಸೋಂಕು, 4,329 ಮಂದಿ ಬಲಿ Corona
ನವದೆಹಲಿ : ದೇಶದಲ್ಲಿ ಕಳೆದ ಕೆಲ ದಿನಗಳಿಂದ ಕೊರೊನಾ ಸೋಂಕಿನ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದೆ.
ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 2,63,533 ಮಂದಿಗೆ ಹೊಸದಾಗಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. 4,329 ಮಂದಿ ಹೆಮ್ಮಾರಿಗೆ ಬಲಿಯಾಗಿದ್ದಾರೆ.
ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 2,63,533 ಮಂದಿಗೆ ಹೊಸದಾಗಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.
4,329 ಮಂದಿ ಸೋಂಕಿನಿಂದ ಕೊನೆಯುಸಿರೆಳೆದಿದ್ದಾರೆ.
ಇದರೊಂದಿಗೆ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 2,52,28,996 ಕ್ಕೆ ಕೊರೊನಾಗೆ ಮೃತಪಟ್ಟವರ ಸಂಖ್ಯೆ 2,72,719 ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ ಈವರೆಗೂ 2,15,96,512 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.
ದೇಶದಲ್ಲಿನ್ನೂ 33,53,765 ಸಕ್ರಿಯ ಪ್ರಕರಣಗಳಿವೆ.










