ಕೊರೊನಾ ರಿಪೋರ್ಟ್ : 25,072 ಮಂದಿಗೆ ಸೋಂಕು, 389 ಬಲಿ
ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿನ ಏರಿಳಿತ ಮುಂದುವರೆದಿದ್ದು, ಕಳೆದ 24 ತಾಸುಗಳ ಅವಧಿಯಲ್ಲಿ 25,072 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 389 ಮಂದಿ ಹೆಮ್ಮಾರಿ ಸೋಂಕಿಗೆ ಉಸಿರು ಇಲ್ಲಿಸಿದ್ದಾರೆ.
ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,24,49,306ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,34,756ಕ್ಕೆ ಏರಿಕೆಯಾಗಿದೆ.
ಇನ್ನು ಇದೇ ಅವಧಿಯಲ್ಲಿ 44,157 ಮಂದಿ ಹೆಮ್ಮಾರಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಇದರೊಂದಿಗೆ ಈವರೆಗೂ 3,16,80,626 ಮಂದಿ ಸೋಂಕಿನಿಂದ ಚೇತರಿಸಿಕೊಂಡಂತಾಗಿದೆ. ಇನ್ನು ದೇಶದಲ್ಲಿ 3,33,924 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.









