ಕೊರೊನಾ ರಿಪೋರ್ಟ್ : ಕಳೆದ 24 ಗಂಟೇಲಿ 25,166 ಕೇಸ್ ಪತ್ತೆ Corona Report
ನವದೆಹಲಿ : ಭಾರತದಲ್ಲಿ ಕೊರೊನಾ ಸೋಂಕು ಪ್ರಕರಣಗಳ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 25,166 ಹೊಸ ಪ್ರಕರಣಗಳು ದಾಖಲಾಗಿವೆ.
ಇದೇ ಅವಧಿಯಲ್ಲಿ 36,830 ಮಂದಿ ಗುಣಮುಖರಾಗಿದ್ದು, 437 ಜನ ಸಾವಿಗೀಡಾಗಿದ್ದಾರೆ.
ಇದರೊಂದಿಗೆ ದೇಶದಲ್ಲಿ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ 3.22 ಕೋಟಿಗೆ ಏರಿಕೆಯಾಗಿದ್ದು, ಈ ಪೈಕಿ 3.14 ಕೋಟಿಗೂ ಹೆಚ್ಚು ಜನರು ಗುಣಮುಖರಾಗಿದ್ದಾರೆ.
ಇನ್ನು ಈವರೆಗೂ ದೇಶದಲ್ಲಿ ಕೊರೊನಾ ಸೋಂಕಿಗೆ 4,32,079 ಮಂದಿ ಮೃತಪಟ್ಟಿದ್ದಾರೆ.
ದೇಶದಲ್ಲಿ ಪ್ರಸ್ತುತ ಸಕ್ರಿಯ ಪ್ರಕರಣಗಳ ಸಂಖ್ಯೆ 3,69,846ಕ್ಕೆ ತಲುಪಿದೆ ಹಾಗೂ ಚೇತರಿಕೆ ಪ್ರಮಾಣ ಶೇ 97.51ರಷ್ಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಪ್ರಕಟಣೆಯಿಂದ ತಿಳಿದು ಬಂದಿದೆ.









