ಕೊರೊನಾ ರಿಪೋರ್ಟ್ | ಕಳೆದ 24 ಗಂಟೇಲಿ 26,041 ಕೇಸ್ ಪತ್ತೆ
ನವದೆಹಲಿ : ಭಾರತದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಏರಿಳಿತ ಮುಂದುವರೆದಿದೆ. ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 26,041 ಕೊರೊನಾ ಕೇಸ್ ಗಳು ಪತ್ತೆಯಾಗಿವೆ. ಅಲ್ಲದೇ ಇದೇ ಅವಧಿಯಲ್ಲಿ 276 ಜನ ಮಹಾಮಾರಿಗೆ ಬಲಿಯಾಗಿದ್ದಾರೆ.
ಇದರೊಂದಿಗೆ ದೇಶದಾದ್ಯಂತ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ 3,36,78,786ಕ್ಕೆ ಏರಿಕೆಯಾಗಿದೆ. ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 447194 ಕ್ಕೆ ಏರಿಕೆಯಾಗಿದೆ.
ನಿನ್ನೆ 29621 ಜನರು ಹೆಮ್ಮಾರಿ ಸೋಂಕಿನಿಂದ ಕೊನೆಯುಸಿರೆಳೆದಿದ್ದು, ದೇಶದಲ್ಲಿ ಈವರೆಗೆ 32931972 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ದೇಶದಲ್ಲಿ 299620 ಕೋವಿಡ್ ಸಕ್ರಿಯ ಪ್ರಕರಣಗಳಿವೆ.
ಇನ್ನು ದೇಶದಲ್ಲಿ ಈವರೆಗೆ ಒಟ್ಟು 86,01,59,011 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.









