ಕೊರೊನಾ ರಿಪೋರ್ಟ್ : ಕಳೆದ 24 ಗಂಟೇಲಿ 28,204 ಕೇಸ್ ಪತ್ತೆ Corona Report
ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದೆ.
ಕಳೆದ 24 ಗಂಟೆಗಳಲ್ಲಿ ಕೊರೊನಾ ಸೋಂಕಿನ ಸಂಖ್ಯೆಯಲ್ಲಿ ಭಾರಿ ಇಳಿಕೆ ಕಂಡಿದ್ದು, ನಿನ್ನೆ 28,204 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.
ನಿನ್ನೆ 373 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 428682ಕ್ಕೆ ಏರಿಕೆಯಾಗಿದೆ.
ಇನ್ನು ಕಳೆದ 24 ಗಂಟೆಗಳಲ್ಲಿ 41511 ಜನರು ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 31180968 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ಇನ್ನು ದೇಶದಲ್ಲಿ 388508 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ದೇಶದಲ್ಲಿ ಈವರೆಗೆ ಒಟ್ಟು 51,45,00,268 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.









