ಕೊರೊನಾ ರಿಪೋರ್ಟ್ : ಕಳೆದ 24 ಗಂಟೇಲಿ 29,616 ಮಂದಿಗೆ ಸೋಂಕು Corona Report saaksha tv
ನವದೆಹಲಿ : ಭಾರತದಲ್ಲಿ ಕೊರೊನಾ ಸೋಂಕಿನ ಏರಿಳಿತ ಮುಂದುವರೆದಿದೆ.
ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 29,616 ಕೊರೊನಾ ಕೇಸ್ ಗಳು ಪತ್ತೆಯಾಗಿವೆ.
ಇದರ ಜೊತೆಗೆ 290 ಮಂದಿ ಹೆಮ್ಮಾರಿ ಸೋಂಕಿಗೆ ಬಲಿಯಾಗಿದ್ದಾರೆ.
ಇದರೊಂದಿಗೆ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 3,28,76,319ಕ್ಕೆ ಏರಿಕೆಯಾಗಿದೆ.
ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 446658 ಕ್ಕೆ ಏರಿಕೆಯಾಗಿದೆ.
ಇನ್ನು ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 28046 ಜನರು ಹೆಮ್ಮಾರಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.
ಇದರೊಂದಿಗೆ ಒಟ್ಟಾರೆ ಈವರೆಗೆ 32876319 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ದೇಶದಲ್ಲಿನ್ನೂ 301442 ಕೋವಿಡ್ ಸಕ್ರಿಯ ಪ್ರಕರಣಗಳಿವೆ.
ದೇಶದಲ್ಲಿ ಈವರೆಗೆ ಒಟ್ಟು 84,89,29,160 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.