ಕೊರೊನಾ ರಿಪೋರ್ಟ್ | 24 ಗಂಟೆಗಳಲ್ಲಿ 30,093 ಕೇಸ್ ಪತ್ತೆ
ನವದೆಹಲಿ : ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 30,093 ಹೊಸ ಕೊರೊನಾ ಕೇಸ್ ಗಳು ಪತ್ತೆಯಾಗಿವೆ.
ಇದೇ ಅವಧಿಯಲ್ಲಿ 374 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.
ಇದರೊಂದಿಗೆ ದೇಶದಲ್ಲಿ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ 3,11,74,322ಕ್ಕೆ ತಲುಪಿದ್ದು, ಸಾವಿನ 4,14,482ಕ್ಕೆ ಏರಿಕೆಯಾಗಿದೆ.
ಇನ್ನು ಕಳೆದ 24 ಗಂಟೆಗಳಲ್ಲಿ 45,254 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ.
ಇದರೊಂದಿಗೆ ದೇಶದಲ್ಲಿ ಒಟ್ಟಾರೆ ಕೊರೊನಾ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 3,03,53,710ಕ್ಕೆ ತಲುಪಿದೆ.
ದೇಶದಲ್ಲಿ ಗುಣಮುಖರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಸಕ್ರಿಯ ಸೋಂಕಿತರ ಸಂಖ್ಯೆ 4,06,130ಕ್ಕೆ ಕುಸಿದಿದೆ.









