ಕೊರೊನಾ ರಿಪೋರ್ಟ್ : ಕಳೆದ 24 ಗಂಟೇಲಿ 30,570 ಕೇಸ್ ಪತ್ತೆ
ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿನ ಏರಿಳಿತ ಮುಂದುವರೆದಿದೆ. ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 30,570 ಕೊರೊನಾ ಪ್ರಕರಣಗಳು ದೃಢಪಟ್ಟಿವೆ. ಇದೇ ಅವಧಿಯಲ್ಲಿ 431 ಮಂದಿ ಸಾವನ್ನಪ್ಪಿದ್ದಾರೆ.
ಇದರೊಂದಿಗೆ ದೇಶದಲ್ಲಿ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ 3,33,47,325ಕ್ಕೆ ತಲುಪಿದ್ದು, ಹೆಮ್ಮಾರಿ ಸೋಂಕಿನಿಂದ ಉಸಿರು ನಿಲ್ಲಿಸಿದವರ ಸಂಖ್ಯೆ 4,43,928ಕ್ಕೆ ಏರಿಕೆಯಾಗಿದೆ.
ಇನ್ನು ನಿನ್ನೆ 38,303 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದು, ದೇಶದಾದ್ಯಂತ ಈವರೆಗೂ 3,25,60,474 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ದೇಶದಲ್ಲಿನ್ನೂ 3,42,923 ಸಕ್ರಿಯ ಪ್ರಕರಣಗಳಿವೆ.









