ಕೊರೊನಾ Corona ರಿಪೋರ್ಟ್ : ನಿನ್ನೆ 3,11,170 ಮಂದಿಗೆ ಸೋಂಕು, 3,62,437 ಮಂದಿ ಡಿಸ್ಚಾರ್ಜ್
ನವದೆಹಲಿ : ದೇಶದಲ್ಲಿ ಕೊರೊನಾ ವೈರಸ್ ಟಾಪ್ ಗೇರ್ ನಲ್ಲಿ ಮುನ್ನುಗ್ಗುತ್ತಿದೆ.ಹೆಮ್ಮಾರಿಯ ದಾಳಿಗೆ ಸಾಕಷ್ಟು ಮಂದಿ ಕೊನೆಯುಸಿರೆಳೆಯುತ್ತಿದ್ದಾರೆ.
ಇದರ ಮಧ್ಯೆ ದೇಶದಲ್ಲಿ ಕೊರೊನಾ ಸೋಂಕಿನಿಂದ ಚೇತರಿಸಿಕೊಳ್ಳುತ್ತಿರುವ ಸಂಖ್ಯೆ ಕೂಡ ಗಣನೀಯವಾಗಿ ಹೆಚ್ಚುತ್ತಿದೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಾಹಿತಿ ಪ್ರಕಾರ, ದೇಶದಲ್ಲಿ ಕಳೆದ 24 ಗಂಟೆಯಲ್ಲಿ 3,11,170 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,46,84,077ಕ್ಕೆ ಏರಿಕೆಯಾಗಿದೆ.
ಇದೇ ಅವಧಿಯಲ್ಲಿ 4,077 ಜನರು ಮಹಾಮಾರಿಗೆ ಬಲಿಯಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 2,70,284ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 3,62,437 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ಈವರೆಗೂ 2,07,95,335 ಸೋಂಕಿತರು ಗುಣಮುಖರಾಗಿದ್ದಾರೆ. ದೇಶದಲ್ಲಿನ್ನೂ 36,18,458 ಕೋವಿಡ್ ಸಕ್ರಿಯ ಪ್ರಕರಣಗಳಿವೆ.