ಕೊರೊನಾ ರಿಪೋರ್ಟ್ : ನಿನ್ನೆ 3,43,144 ಮಂದಿಗೆ ಸೋಂಕು, 3,44,776 ಮಂದಿ ಡಿಸ್ಚಾರ್ಜ್
ನವದೆಹಲಿ : ಸಾಕಷ್ಟು ಕ್ರಮಗಳನ್ನು ತೆಗೆದುಕೊಂಡ ಬಳಿಕವೂ ದೇಶದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದೆ.
ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 3,43,144 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, 4 ಸಾವಿರ ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಕೇಂದ್ರ ಆರೋಗ್ಯ ಇಲಾಕೆಯ ಮಾಹಿತಿ ಪ್ರಕಾರ, ನಿನ್ನೆ 3,43,144 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, 4 ಸಾವಿರ ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 2,40,46,809ಕ್ಕೆ ಏರಿಕೆಯಾಗಿದ್ದು, ಸಾವಿಗೀಡಾದವರ ಸಂಖ್ಯೆ 2,62,317ಕ್ಕೆ ತಲುಪಿದೆ.
ಇನ್ನು ಮುಖ್ಯವಾಗಿ ನಿನ್ನೆ 3,44,776 ಮಂದಿ ಕೊರೋನಾದಿಂದ ಚೇತರಿಸಿಕೊಂಡಿದ್ದು, ಒಟ್ಟು ಚೇತರಿಕೆಯ ಪ್ರಮಾಣ 2,00,79,599ಕ್ಕೆ ತಲುಪಿದೆ. ದೇಶದಲ್ಲಿನ್ನೂ 37,04,893 ಸಕ್ರಿಯ ಪ್ರಕರಣಗಳಿವೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.