ಕೊರೊನಾ ರಿಪೋರ್ಟ್ : ಕಳೆದ 24 ಗಂಟೇಲಿ 34,973 ಮಂದಿಗೆ ಸೋಂಕು Corona Report
ನವದೆಹಲಿ : ದೇಶದಲ್ಲಿ ಮಾರಕ ಕೊರೊನಾ ವೈರಸ್ ಏರಿಳಿತ ಮುಂದುವರೆದಿದೆ.
ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 34,973 ಕೊರೊನಾ ಕೇಸ್ ಗಳು ಪತ್ತೆಯಾಗಿವೆ.
ಇದೇ ಅವಧಿಯಲ್ಲಿ 260 ಮಂದಿ ಸೋಂಕಿತರು ಪ್ರಾಣ ಕಳೆದುಕೊಂಡಿದ್ದಾರೆ.
ಇದರೊಂದಿಗೆ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 3,31,74,954ಕ್ಕೆ ಏರಿಕೆಯಾಗಿದೆ.
ಹೆಮ್ಮಾರಿ ಕೋವಿಡ್-19 ಸಾಂಕ್ರಾಮಿಕಕ್ಕೆ ಬಲಿಯಾದವರ ಸಂಖ್ಯೆ 4,42,009ಕ್ಕೆ ಏರಿಕೆಯಾಗಿದೆ.
ಇನ್ನು ನಿನ್ನೆ ದೇಶದಾದ್ಯಂತ 37,681 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದು ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.
ಆ ಮೂಲಕ ದೇಶದಲ್ಲಿ ಸೋಂಕಿನಿಂದ ಗುಣಮುಖರಾದ ಒಟ್ಟಾರೆ ಸೋಂಕಿತರ ಸಂಖ್ಯೆ 3,23,42,299ಕ್ಕೆ ಏರಿಕೆಯಾದಂತಾಗಿದೆ. ದೇಶದಲ್ಲಿನ್ನೂ 3,90,646 ಸಕ್ರಿಯ ಪ್ರಕರಣಗಳಿವೆ.