ಕೊರೊನಾ ರಿಪೋರ್ಟ್ : ಕಳೆದ 24 ಗಂಟೇಲಿ 37,593 ಕೇಸ್ ಪತ್ತೆ Corona Report
ನವದೆಹಲಿ : ಭಾರತದಲ್ಲಿ ಕೊರೊನಾ ಸೋಂಕಿನ ಏರಿಳಿತ ಮುಂದುವರೆದಿದೆ.
ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 37,593 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ.
648 ಮಂದಿ ಹೆಮ್ಮಾರಿ ಸೋಂಕಿಗೆ ಕೊನೆಯುಸಿರೆಳೆದಿದ್ದಾರೆ.
ಇದರೊಂದಿಗೆ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 32,512,366 ಕ್ಕೆ ಏರಿಕೆಯಾಗಿದೆ.
ಕಿಲ್ಲರ್ ಕೊರೊನಾದಿಂದ ಕೊನೆಯುಸಿರೆಳೆದಿರುವವರ ಸಂಖ್ಯೆ 435,758 ಕ್ಕೆ ತಲುಪಿದೆ.
ಇನ್ನು ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 34,169 ಜನರು ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.
ಇದರೊಂದಿಗೆ ದೇಶದಲ್ಲಿ ಈವರೆಗೂ ಸೋಂಕಿನಿಂದ ಚೇತರಿಸಿಕೊಂಡಿರುವವ ಸಂಖ್ಯೆ 31,754,281 ಕ್ಕೆ ಏರಿಕೆಯಾಗಿದೆ.









