ಕೊರೊನಾ ರಿಪೋರ್ಟ್ | ಕಳೆದ 24 ಗಂಟೇಲಿ 40,135 ಕೇಸ್ ಪತ್ತೆ Corona Report saaksha tv
ನವದೆಹಲಿ : ಭಾರತದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.
ಕಳೆದ 24 ಗಂಟೆಯಲ್ಲಿ 40,135 ಮಂದಿಗೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಪತ್ತೆಯಾಗಿವೆ.
ಇದೇ ಅವಧಿಯಲ್ಲಿ 422 ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ.
ಇದರೊಂದಿಗೆ ಭಾರತದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 3,16,95,958 ಕ್ಕೆ ಏರಿಕೆಯಾಗಿದೆ.
ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 4,24,773 ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ 36,946 ಮಂದಿ ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ಈ ಮೂಲಕ ಒಟ್ಟು 3,08,57,467 ಕೊರೊನಾ ಸೋಂಕಿತರು ಡಿಸ್ಚಾರ್ಜ್ ಆಗಿದ್ದಾರೆ.
ದೇಶದಲ್ಲಿ ಇನ್ನೂ 4,13,718 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.










