ಕೊರೊನಾ ರಿಪೋರ್ಟ್ : ಕಳೆದ 24 ಗಂಟೇಲಿ 41,831 ಕೇಸ್ ಪತ್ತೆ Corona Report
ನವದೆಹಲಿ : ದೇಶದಲ್ಲಿ ಮತ್ತೆ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 41,831 ಕೇಸ್ ಗಳು ಹೊಸದಾಗಿ ಪತ್ತೆಯಾಗಿದೆ. ಇದೇ ಅವಧಿಯಲ್ಲಿ 541 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ.
ಇದರೊಂದಿಗೆ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 424351 ಕ್ಕೆ ಏರಿಕೆಯಾಗಿದೆ.
24 ಗಂಟೆಯಲ್ಲಿ 39258 ಜನರು ಗುಣಮುಖರಾಗಿದ್ದು, ದೇಶದಲ್ಲಿ ಈವರೆಗೆ 30820521 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿನ್ನೂ 410952 ಕೋವಿಡ್ ಸಕ್ರಿಯ ಪ್ರಕರಣಗಳಿವೆ.
24ಗಂಟೆಯಲ್ಲಿ 60,15,842 ಜನರಿಗೆ ಲಸಿಕೆ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 47,02,98,596 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.