ಕೊರೊನಾ ರಿಪೋರ್ಟ್ : ಕಳೆದ 24 ಗಂಟೇಲಿ 42,909 ಕೇಸ್ ಪತ್ತೆ Corona Report saaksha tv
ನವದೆಹಲಿ : ಭಾರತದಲ್ಲಿ ಕೊರೊನಾ ಸೋಂಕಿನ ಏರಿಳಿತ ಮುಂದುವರೆದಿದೆ.
ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 42,909 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.
ಕಳೆದ 24 ಗಂಟೆಯಲ್ಲಿ 380 ಜನ ಮಹಾಮಾರಿಗೆ ಬಲಿಯಾಗಿದ್ದು, ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 438210ಕ್ಕೆ ಏರಿಕೆಯಾಗಿದೆ.
ಇನ್ನು ನಿನ್ನೆ ದೇಶದಲ್ಲಿ 34763 ಜನರು ಹೆಮ್ಮಾರಿ ಸೋಂಕಿನಿಂದ ಗುಣಮುಖರಾಗಿದ್ದಾರೆ.
ದೇಶದಲ್ಲಿ ಈವರೆಗೆ 31923405 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿನ್ನೂ 376324 ಕೋವಿಡ್ ಸಕ್ರಿಯ ಪ್ರಕರಣಗಳಿವೆ.
ದೇಶದಲ್ಲಿ ಈವರೆಗೆ ಒಟ್ಟು 63,43,81,358 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.









