ಕೊರೊನಾ ರಿಪೋರ್ಟ್ : ಕಳೆದ 24 ಗಂಟೇಲಿ 42,982 ಕೇಸ್ ಪತ್ತೆ
ನವದೆಹಲಿ : ಭಾರತದಲ್ಲಿ ಕೊರೊನಾ ಸೋಂಕಿನ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 42,982 ಕೊರೊನಾ ಕೇಸ್ ಗಳು ಪತ್ತೆಯಾಗಿದೆ.
ಇದೇ ಅವಧಿಯಲ್ಲಿ 533 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ.
ಇದರೊಂದಿಗೆ ದೇಶದಲ್ಲಿ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ 3,18,12,114ಕ್ಕೆ ಏರಿಕೆಯಾಗಿದೆ.
ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 4,26,290ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ (ಆಗಸ್ಟ್ 05) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ದೇಶದಲ್ಲಿನ್ನು ಒಟ್ಟು 4,10353 ಸಕ್ರಿಯ ಕೋವಿಡ್ ಪ್ರಕರಣಗಳಿದ್ದು, ಈವರೆಗೂ ದೇಶಾದ್ಯಂತ 3,09,74,748 ಮಂದಿ ಕೋವಿಡ್ ನಿಂದ ಚೇತರಿಸಿಕೊಂಡಿದ್ದಾರೆ. ದೇಶದಲ್ಲಿ ಚೇತರಿಕೆ ಪ್ರಮಾಣ ಶೇ.97.37ಕ್ಕೆ ಏರಿಕೆಯಾಗಿದೆ.









