ಕೊರೊನಾ ರಿಪೋರ್ಟ್ : ನಿನ್ನೆ 43,393 ಮಂದಿಗೆ ಸೋಂಕು Corona Report
ನವದೆಹಲಿ : ಭಾರತದಲ್ಲಿ ಇಳಿಮುಖವಾಗುತ್ತಿದ್ದ ಕೊರೊನಾ ಹೆಮ್ಮಾರಿ ಮತ್ತೆ ತನ್ನ ಕಬಂದ ಬಾಹುಗಳನ್ನು ಚಾಚಲು ಶುರು ಮಾಡಿದೆ.
ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 43,393 ಜನರಲ್ಲಿ ಸೋಂಕು ಪತ್ತೆಯಾಗಿದ್ದು 911 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ.
ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ, ದೇಶದಾದ್ಯಂತ ನಿನ್ನೆ 43,393 ಕೊರೊನಾ ಕೇಸ್ ಗಳು ಪತ್ತೆಯಾಗಿದ್ದು, 911 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ.
ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,07,52,950ಕ್ಕೆ ತಲುಪಿದರೇ ಇದುವರೆಗೂ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 4,05,939ಕ್ಕೆ ಏರಿಕೆಯಾಗಿದೆ.
ಇನ್ನು ಕಳೆದ 24 ಗಂಟೆಯಲ್ಲಿ 44,459 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ಇದರೊಂದಿಗೆ ಈವರೆಗೂ 2,98,88,284 ಸೋಂಕಿನಿಂದ ಗುಣಮುಖರಾದಂತಾಗಿದೆ. ದೇಶದಲ್ಲಿನ್ನೂ 4,58,727 ಕೋವಿಡ್ ಸಕ್ರಿಯ ಪ್ರಕರಣಗಳಿವೆ.