Corona Report : ನಿನ್ನೆ 44,111 ಜನರಲ್ಲಿ ಸೋಂಕು ಪತ್ತೆ
ನವದೆಹಲಿ : ಭಾರತದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 44,111 ಜನರಲ್ಲಿ ಸೋಂಕು ಪತ್ತೆಯಾಗಿದೆ. 57,477 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 44,111 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, 738 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ.
ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,05,02,362ಕ್ಕೆ, ಸೋಂಕಿಗೆ ಬಲಿಯಾದವರ ಸಂಖ್ಯೆ 4,01,050ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 4,95,533 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 2,96,05,779 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ಕಳೆದ 24 ಗಂಟೆಯಲ್ಲಿ 57,477 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.