ಕೊರೊನಾ ರಿಪೋರ್ಟ್ ( Corona Report ): ಕಳೆದ 24 ಗಂಟೇಲಿ 44,643 ಕೇಸ್ ಪತ್ತೆ
ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 44,643 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 464 ಮಂದಿ ಹೆಮ್ಮಾರಿ ಸೋಂಕಿಗೆ ಬಲಿಯಾಗಿದ್ದಾರೆ.
ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,18,56,757ಕ್ಕೆ ತಲುಪಿದ್ದು, ಸಾವಿನ 426,785ಕ್ಕೆ ಏರಿಕೆಯಾಗಿದೆ.
ಇನ್ನು ಕಳೆದ 24 ಗಂಟೆಗಳಲ್ಲಿ 41,096 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,10,15,844ಕ್ಕೆ ತಲುಪಿದೆ.

ದೇಶದಲ್ಲಿನ್ನೂ 4,14,159 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಇನ್ನು ಭಾರತದಲ್ಲಿ ಒಂದೇ 16,40,287 ಮಂದಿಯನ್ನು ಕೊರೊನಾ ಪರೀಕ್ಷೆಗೊಳಪಡಿಸಲಾಗಿದ್ದು, 47,65,33,650 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.









