ಕೊರೊನಾ ರಿಪೋರ್ಟ್ : ಕಳೆದ 24 ಗಂಟೇಲಿ 45,083 ಕೇಸ್ ಪತ್ತೆ Corona Report saaksha tv
ನವದೆಹಲಿ : ಭಾರತದಲ್ಲಿ ಕೊರೊನಾ ಸೋಂಕಿನ ಏರಿಳಿತ ಮುಂದುವರೆದಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 45,083 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಇದೇ ಅವಧಿಯಲ್ಲಿ 460 ಜನ ಮಹಾಮಾರಿಗೆ ಬಲಿಯಾಗಿದ್ದಾರೆ.
ಇದರೊಂದಿಗೆ ಕೊರೊನಾ ಸೋಂಕಿತರ ಸಂಖ್ಯೆ 3.26 ಕೋಟಿಯಷ್ಟಾಗಿದ್ದು, ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 437830 ಕ್ಕೆ ಏರಿಕೆಯಾಗಿದೆ.
ಇನ್ನು 24 ಗಂಟೆಯಲ್ಲಿ 35840 ಜನರು ಹೆಮ್ಮಾರಿ ಸೋಂಕಿನಿಂದ ಗುಣಮುಖರಾಗಿದ್ದು, ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.
ದೇಶದಲ್ಲಿ ಸದ್ಯ 368558 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ದೇಶದಲ್ಲಿ ಈವರೆಗೆ ಒಟ್ಟು 63,09,17,927 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.









