Corona Report : ನಿನ್ನೆ 51,667 ಕೇಸ್ ಪತ್ತೆ, 64,527 ಮಂದಿ ಡಿಸ್ಚಾರ್ಜ್
ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿನ ಆರ್ಭಟ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 51,667 ಹೊಸ ಕೊರೊನಾ ಕೇಸ್ ಗಳು ಪತ್ತೆಯಾಗಿವೆ.
ಇದೇ ಅವಧಿಯಲ್ಲಿ 64,527 ರೋಗಿಗಳು ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ ಚೇತರಿಕೆ ಪ್ರಮಾಣ ಶೇ. 96.66ಕ್ಕೆ ಹೆಚ್ಚಳವಾಗಿದೆ.
ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ ಕಳೆದ 24 ಗಂಟೆಗಳ ಅವಧಿಯಲ್ಲಿ 1,329 ಜನರು ಸೋಂಕಿಗೆ ಬಲಿಯಾಗಿದ್ದಾರೆ.
ದೇಶದಲ್ಲೀಗ ಒಟ್ಟು ಸೋಂಕಿತರ ಸಂಖ್ಯೆ 3,01,34,445 ಹಾಗೂ ಮೃತರ ಸಂಖ್ಯೆ 3,93,310ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಇಲ್ಲಿಯವರೆಗೆ 2,91,28,267 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, ಆಕ್ಟಿವ್ ಕೇಸ್‍ಗಳ ಸಂಖ್ಯೆ 6,12,868ಕ್ಕೆ ಇಳಿಕೆಯಾಗಿದೆ.