ಕೊರೊನಾ Corona ರಿಪೋರ್ಟ್ : ಕಳೆದ 24 ಗಂಟೇಲಿ 86,498 ಜನರಿಗೆ ಸೋಂಕು
ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಅಬ್ಬರ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗಿದ್ದು, ಕಳೆದ 24 ಗಂಟೆಗಳಲ್ಲಿ 86,498 ಜನರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.
ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 86,498 ಜನರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದ್ದು, 2123 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.
ಇದರೊಂದಿಗೆ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 2,89,96,473 ಕ್ಕೆ ಏರಿಕೆಯಾಗಿದೆ. ಜೊತೆಗೆ ಕೊರೊನಾ ಸೋಂಕಿಗೆ ಸಾವನ್ನಪ್ಪಿದವರ ಸಂಖ್ಯೆ 3,51,309 ಕ್ಕೆ ಏರಿಕೆಯಾಗಿದೆ.
ಇನ್ನು ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 1,82,282 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದಾರೆ.
ಇದರೊಂದಿಗೆ ದೇಶದಲ್ಲಿ ಈವರೆಗೆ 2,73,41,462 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆದಂತಾಗಿದೆ. ಸದ್ಯ ದೇಶದಲ್ಲಿ 13,03,702 ಸಕ್ರಿಯ ಪ್ರಕರಣಗಳಿವೆ.









