ಕೊರೊನಾ Corona ರಿಪೋರ್ಟ್ : ಕಳೆದ 24 ಗಂಟೆಗಳಲ್ಲಿ 91,702 ಮಂದಿಗೆ ಸೋಂಕು
ನವದೆಹಲಿ : ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಹೊಸದಾಗಿ 91,702 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದೇ ಅವಧಿಯಲ್ಲಿ 1,34,580 ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 91,702 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
3,403 ಮಂದಿ ಕೊರೊನಾ ಸೋಂಕಿಗೆ ಸಾವನ್ನಪ್ಪಿದ್ದಾರೆ. ಇದರೊಂದಿಗೆ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,92,74,823 ಕ್ಕೆ ಕಿಲ್ಲರ್ ಕೊರೊನಾಗೆ ಮೃತಪಟ್ಟವರ ಸಂಖ್ಯೆ 3,63,079 ಕ್ಕೆ ಏರಿಕೆಯಾಗಿದೆ.
ಇನ್ನು ಕಳೆದ 24 ಗಂಟೆಗಳಲ್ಲಿ 1,34,580 ಕೊರೊನಾದಿಂದ ಗುಣಮುಖರಾಗಿದ್ದಾರೆ.
ಇದರೊಂದಿಗೆ ಈವರೆಗೂ ದೇಶದಲ್ಲಿ 2,77,90,073 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆದಂತಾಗಿದೆ. ಸದ್ಯ ದೇಶದಲ್ಲಿ 11,21,671 ಸಕ್ರಿಯ ಪ್ರಕರಣಗಳಿವೆ.