Corona Report : ಕೊರೊನಾ ಸೋಂಕಿತರ ಸಂಖ್ಯೆ ಗಣನೀಯ ಇಳಿಕೆ
ನವದೆಹಲಿ : ದೇಶದಲ್ಲಿ ಹೊಸದಾಗಿ ಪತ್ತೆಯಾಗುತ್ತಿರುವ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯವಾಗಿ ಇಳಿಕೆ ಕಂಡಿದೆ.
ಕಳೆದ 24 ಗಂಟೆಗಳಲ್ಲಿ 37,154 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. 724 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ.
ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 37,154 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.
724 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 3,08,74,376ಕ್ಕೆ ಸೋಂಕಿಗೆ ಬಲಿಯಾದವರ ಸಂಖ್ಯೆ 4,08,764ಕ್ಕೆ ಏರಿಕೆಯಾಗಿದೆ.
ಇನ್ನು ಕಳೆದ 24 ಗಂಟೆಯಲ್ಲಿ 39,649 ಜನರು ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 3,00,14,713 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿನ್ನೂ 4,50,899 ಕೋವಿಡ್ ಸಕ್ರಿಯ ಪ್ರಕರಣಗಳಿವೆ.