ಕೊರೊನಾ ರಿಪೋರ್ಟ್ : ಕಳೆದ 24 ಗಂಟೇಲಿ 92,596 ಜನರಲ್ಲಿ ಸೋಂಕು Corona
ನವದೆಹಲಿ : ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ನ ಆರ್ಭಟ ಕಡಿಮೆಯಾಗುತ್ತಿದ್ದು, ಕಳೆದ ಎರಡು ದಿನಗಳಿದ 1 ಲಕ್ಷಕ್ಕೂ ಕಡಿಮೆ ಸಂಖ್ಯೆಯಲ್ಲಿ ಸೋಂಕಿತರು ಪತ್ತೆಯಾಗಿದ್ದಾರೆ.
ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ, ದೇಶದಲ್ಲಿ ಕಳೆದ 24 ಗಂಟೆಯಲ್ಲಿ 92,596 ಜನರಲ್ಲಿ ಸೋಂಕು ಪತ್ತೆಯಾಗಿದೆ. 2219 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ.
ಈ ಮೂಲಕ ದೇಶದಲ್ಲಿ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ 2,90,89,069ಕ್ಕೆ ಏರಿಕೆಯಾಗಿದ್ದು, ಕೋವಿಡ್ ಗೆ ಬಲಿಯಾದವರ ಸಂಖ್ಯೆ 3,53,528 ಕ್ಕೆ ಏರಿಕೆಯಾಗಿದೆ.
ಇನ್ನು ನಿನ್ನೆ ದೇಶದಲ್ಲಿ 1,62,664 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ಈವರೆಗೂ 2,75,04,126 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ದೇಶದಲ್ಲಿನ್ನೂ 12,31,415 ಕೋವಿಡ್ ಸಕ್ರಿಯ ಪ್ರಕರಣಗಳಿವೆ.










